Kannada NewsKarnataka NewsLatest

*ಮತ್ತೊಂದು ದುರಂತ: ಚಲಿಸುತ್ತಿದ್ದ ರೈಲಿನಿಂದ ಬಿದ್ದು ಪ್ರಯಾಣಿಕ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಇತ್ತೀಚಿನ ದಿನಗಳಲ್ಲಿ ರೈಲಿನಿಂದ ಬಿದ್ದು ಪ್ರಯಾಣಿಕರು ಸಾವನ್ನಪ್ಪುತ್ತಿರುವ ಸಂಖ್ಯೆ ಹೆಚ್ಚುತ್ತಿದೆ. ಚಲಿಸುತ್ತಿದ್ದ ರೈಲಿನಿಂದ ಬಿದ್ದು ವ್ಯಕ್ತಿಯೋರ್ವರು ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಮೈಸೂರಿನ ನಾಗನೂರುಹಳ್ಳಿ ಬಳಿ ಈ ದುರಂತ ಸಂಭವಿಸಿದೆ. ೬೪ ವರ್ಷದ ಪ್ರಸನ್ನ ಮ್ರ‍ಿತ ದುರ್ದೈವಿ. ಕುಕ್ಕೆ ಸುಬ್ರಹ್ಮಣ್ಯದ ನಿಕಟವರ್ತಿಗಳು ಎಂದು ತಿಳಿದುಬಂದಿದೆ. ಪ್ರಸನ್ನ ಅವರು ಮೈಸೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದಾಗ ಚಲಿಸುತ್ತಿದ್ದ ರೈಲಿನಿಂದ ಆಕಸ್ಮಿಕವಾಗಿ ಕೆಳಗೆ ಬಿದ್ದಿದ್ದಾರೆ. ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಅವರ ಮೃತದೇಹವನ್ನು ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿದೆ. ಮೈಸೂರು ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button