ಪ್ರಗತಿವಾಹಿನಿ ಸುದ್ದಿ; ಚಿಕ್ಕೋಡಿ: ರೈತರ ಆದಾಯವನ್ನು ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಮತ್ತು ಕೃಷಿ ಉತ್ಪನ್ನಗಳ ರಫ್ತಿಗೆ ಉತ್ತೇಜನ ನೀಡಲು ಭಾರತ ಸರ್ಕಾರವು ಘೋಷಿಸಿರುವ ‘ಕೃಷಿ ಉಡಾನ್ 2.0’ ಯೋಜನೆಯಡಿ ಮೊದಲ ಹಂತದಲ್ಲಿ ಹುಬ್ಬಳ್ಳಿ ಮತ್ತು ಮೈಸೂರು ವಿಮಾನ ನಿಲ್ದಾಣಗಳನ್ನು ಸೇರಿಸಲಾಗಿತ್ತು. ಇದರ ಜೊತೆಗೆ ಉತ್ತರ ಕರ್ನಾಟಕ ಭಾಗದ ಹಾಗೂ ಗಡಿ ಭಾಗದ ಕೃಷಿಕರಿಗೆ ಅನುಕೂಲವಾಗುವಂತೆ ಬೆಳಗಾವಿ ವಿಮಾನ ನಿಲ್ದಾಣವನ್ನು ಸಹ ಸೇರಿಸುವಂತೆ ಸಂಸದ ಅಣ್ಣಾಸಾಹೇಬ ಜೊಲ್ಲೆ ಸಂಸತ್ತಿನಲ್ಲಿ ಮನವಿ ಮಾಡಿದ್ದಾರೆ.
ಸಂಸದರ ಮನವಿಗೆ ಸ್ಪಂದಿಸಿದ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ಸದರಿ ಯೋಜನೆಯ ಅನುಷ್ಠಾನದ ಮೌಲ್ಯಮಾಪನವನ್ನು ನಿಯಮಿತವಾಗಿ ಮಾಡಲಾಗುತ್ತಿದ್ದು, ಸ್ವೀಕರಿಸಿದ ಫಲಿತಾಂಶಗಳು ಮತ್ತು ಕೃಷಿ ಉತ್ಪನ್ನಗಳ ರಫ್ತಿನ ಪ್ರಮಾಣಗಳನ್ನು ಪರಿಗಣಿಸಿ ಬೆಳಗಾವಿ ವಿಮಾನ ನಿಲ್ದಾಣವನ್ನು ಸಹ “ಕೃಷಿ ಉಡಾನ್” ಯೋಜನೆ ಅಡಿ ಸೇರಿಸಲಾಗುತ್ತದೆ ಎಂದು ಭರವಸೆ ನೀಡಿದ್ದಾರೆ.
ಈ ಬಗ್ಗೆ ನಾಗರೀಕ ವಿಮಾನ ಯಾನ ಸಚಿವಾಲಯದಿಂದ ಲಿಖಿತವಾಗಿ ತಿಳಿಸಲಾಗಿದೆ ಎಂದು ಸಂಸದ ಅಣ್ಣಾಸಾಹೇಬ ಜೊಲ್ಲೆ ಮಾಹಿತಿ ನೀಡಿದ್ದಾರೆ.
ಸಿಎಂ ಬಾವುಕ ಮಾತಿನ ಬೆನ್ನಲ್ಲೇ ಬೊಮ್ಮಾಯಿ ಕೇಂದ್ರ ಸಚಿವರಾಗುತ್ತಾರೆ ಎಂದ ನಿರಾಣಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ