Latest

ಭಾರತೀಯ ವೈದ್ಯಕೀಯ ಪದ್ಧತಿ ಅಳವಡಿಕೆಗೆ ಪ್ರಾಧಾನ್ಯತೆ

ಪ್ರಧಾನಿ ಮೋದಿ; ಚಿಕ್ಕೋಡಿ: ಭಾರತೀಯ ವೈದ್ಯಕೀಯ ಪದ್ಧತಿ ಅಳವಡಿಕೆಗೆ ಪ್ರಾಧಾನ್ಯತೆ ಬಗ್ಗೆ ನವದೆಹಲಿಯಲ್ಲಿ ನಡೆಯುತ್ತಿರುವ ಸಂಸತ್ ಅಧಿವೇಶನದಲ್ಲಿ ಚಿಕ್ಕೋಡಿ ಲೋಕಸಭಾ ಸದಸ್ಯ ಅಣ್ಣಾಸಾಹೇಬ ಜೊಲ್ಲೆ ಯವರ ಪ್ರಶ್ನೆಗೆ ಆಯುಷ್ ಸಚಿವ ಸರ್ಬಾನಂದ ಸೋನೋವಾಲ್ ಉತ್ತರಿಸಿದ್ದಾರೆ.

ರಾಷ್ಟ್ರೀಯ ಆಯುಷ್ ವಿಷನ್ ಕೇಂದ್ರ ಪ್ರಾಯೋಜಿತ ಯೋಜನೆಯಡಿಯಲ್ಲಿ ಆಯುರ್ವೇದ ಸೇರಿದಂತೆ 50 ಹಾಸಿಗೆಗಳ ಸಮಗ್ರ ಆಯುಷ್ ಆಸ್ಪತ್ರೆಗಳನ್ನು ಸ್ಥಾಪಿಸಲು ಹಣಕಾಸಿನ ಸಹಾಯಕ್ಕಾಗಿ ಅವಕಾಶವಿದೆ. ರಾಜ್ಯ ವಾರ್ಷಿಕ ಕ್ರಿಯಾ ಯೋಜನೆಗಳ ಮೂಲಕ ಸ್ವೀಕರಿಸಿದ ಪ್ರಸ್ತಾವನೆಗಳ ಪ್ರಕಾರ ಮತ್ತು ಮಾರ್ಗಸೂಚಿಗಳ ಪ್ರಕಾರ ರಾಜ್ಯ ಸರ್ಕಾರಗಳಿಗೆ ಅನುದಾನವನ್ನು ಒದಗಿಸಲಾಗುತ್ತಿದೆ. ಆಯುರ್ವೇದ ಅನುಮೋದಿತ ಮತ್ತು ಕಾರ್ಯಾಚರಣೆಯ ಸ್ಥಿತಿಯನ್ನು ಒಳಗೊಂಡಂತೆ ವಿವಿಧ ರಾಜ್ಯಗಳಲ್ಲಿ ಆಯ್ದ ಸ್ಥಳಗಳಲ್ಲಿ 50 ಹಾಸಿಗೆಗಳ ಸಮಗ್ರ ಆಯುಷ್ ಆಸ್ಪತ್ರೆಗಳನ್ನು ಸ್ಥಾಪಿಸಲಾಗುತ್ತಿದೆ.

ಬಿಎಎಂಎಸ್ ಪದವಿಯನ್ನು ಆಯುರ್ವೇದ ವೈದ್ಯಕೀಯ ಕಾಲೇಜುಗಳ ಮೂಲಕ ಮಾತ್ರ ನೀಡಲಾಗುತ್ತಿದೆ ಇದಕ್ಕಾಗಿ ಭಾರತೀಯ ವೈದೈಕೀಯ ಪದ್ಧತಿಯ ರಾಷ್ಟ್ರೀಯ ಆಯೋಗದ ವೈದ್ಯಕೀಯ ಮೌಲ್ಯಮಾಪನ ಮತ್ತು ರೇಟಿಂಗ್ ಬೋರ್ಡ್ ಅನುಮತಿ ನೀಡುತ್ತಿದೆ. ರಾಜ್ಯ ಸರ್ಕಾರ ಮತ್ತು ಖಾಸಗಿ ಸಂಸ್ಥೆಗಳು ವೈದ್ಯಕೀಯ ಮೌಲ್ಯಮಾಪನ ಮತ್ತು ರೇಟಿಂಗ್ ಬೋರ್ಡ್ ಮತ್ತು ಭಾರತೀಯ ವೈದ್ಯಕೀಯ ಪದ್ದತಿಯ ರಾಷ್ಟ್ರೀಯ ಆಯೋಗಕ್ಕೆ ಅನುಮತಿಗಾಗಿ ಅರ್ಜಿ ಸಲ್ಲಿಸಬಹುದು ಹಾಗೂ ಆಯುಷ್ ಸಚಿವಾಲಯವು ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಪರಿಯೋಜನಾ ಉತ್ಪನ್ನದ ಪಟ್ಟಿಯಲ್ಲಿ ಸೇರಿಸಲು 20 ಆಯುರ್ವೇದ ಜೌಷಧಿಗಳ ಪಟ್ಟಿಯನ್ನು ಫಾರ್ಮಾಸ್ಯುಟಿಕಲ್ಸ್ ಇಲಾಖೆಗೆ ರವಾನಿಸಲಾಗಿದೆ ಎಂದು ತಿಳಿಸಿದ್ದಾರೆ.
ಕಾಶಿ ವಿಶ್ವನಾಥ ಸನ್ನಿದಾನದಲ್ಲಿ ಮೋದಿ; ಗಂಗಾರತಿಯಲ್ಲಿ ಭಾಗಿಯಾದ ಪ್ರಧಾನಿ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button