ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಥೀಮ್ ಆಧಾರಿತ ಪ್ರವಾಸಿ ಸ್ಕೂಟರ್ ಗಳ ಸಮಗ್ರ ಅಭಿವೃದ್ಧಿಗಾಗಿ ಯೋಜನೆ ಕುರಿತು ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಲೋಕಸಭೆಯಲ್ಲಿ ಕೇಳಿದ ಪ್ರಶ್ನೆಗಳಿಗೆ ಕೇಂದ್ರ ಪ್ರವಾಸೋದ್ಯಮ ಸಚಿವ ಜಿ. ಕಿಶನ್ ರೆಡ್ಡಿ ಉತ್ತರ ನೀಡಿದ್ದಾರೆ.
ಪ್ರವಾಸಿ ಕೇಂದ್ರಿತ ವಿಧಾನವನ್ನು ಅನುಸರಿಸಿ, ದೇಶದಲ್ಲಿ ಹೊಸ ಯೋಜನೆಗಳ ಮಂಜೂರಾತಿಗಾಗಿ ಸಚಿವಾಲಯವು ಈಗ ತನ್ನ ಸ್ವದೇಶ್ ದರ್ಶನ್ ಯೋಜನೆಯನ್ನು ಪರಿಷ್ಕರಿಸಿದೆ. ಕರ್ನಾಟಕದಲ್ಲಿ ಸ್ವದೇಶ ದರ್ಶನ ಹಾಗೂ ಪ್ರಶಾದ್ ಯೋಜನೆ ಅಡಿ ದೇವಸ್ಥಾನ ಹಾಗೂ ತೀರ್ಥಯಾತ್ರಾ ಸ್ಥಳಗಳ ಭೇಟಿಗೆ ಭಾರತ ಸರ್ಕಾರದ ಯೋಜನೆ ಅನುಷ್ಠಾನಕ್ಕಾಗಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
ಪ್ರವಾಸೋದ್ಯಮದ ಅಭಿವೃದ್ಧಿಯು ಪ್ರಾಥಮಿಕವಾಗಿ ರಾಜ್ಯ ಸರ್ಕಾರಗಳು/ಕೇಂದ್ರಾಡಳಿತ ಪ್ರದೇಶದ ಆಡಳಿತಗಳ ಜವಾಬ್ದಾರಿಯಾಗಿದೆ. ಪ್ರವಾಸೋದ್ಯಮ ಸಚಿವಾಲಯವು ಸ್ವದೇಶ್ ದರ್ಶನ್ ಯೋಜನೆಯಡಿ ಪ್ರಸ್ತಾವನೆಯನ್ನು ಸಲ್ಲಿಸಲು ಕರ್ನಾಟಕ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿತ್ತು.
ಕರ್ನಾಟಕ ರಾಜ್ಯ ಸರ್ಕಾರವು ಮೈಸೂರಿನ ಚಾಮುಂಡೇಶ್ವರಿ ದೇವಿ ದೇವಸ್ಥಾನವನ್ನು ಪ್ರಸಾದ ಯೋಜನೆಯಡಿ ಅಭಿವೃದ್ಧಿಪಡಿಸಲು ಪರಿಕಲ್ಪನೆಯ ಪ್ರಸ್ತಾವನೆಯನ್ನು ಸಲ್ಲಿಸಿದೆ. ಚಾಮುಂಡೇಶ್ವರಿ ದೇವಸ್ಥಾನಕ್ಕೆ 2022 ರ ಫೆಬ್ರವರಿ 10 ರಂದು ಸ್ಥಳ ಭೇಟಿ ನೀಡಲಾಗಿದ್ದು, ಪ್ರಸ್ತಾವನೆಯ ಅನುಮೋದನೆಗಾಗಿ ವಿವರವಾದ ಯೋಜನಾ ವರದಿಯನ್ನು (ಡಿಪಿಆರ್) ಕರ್ನಾಟಕ ರಾಜ್ಯ ಸರ್ಕಾರದಿಂದ ಸಲ್ಲಿಸಲಾಗುತ್ತಿದೆ.
ರಾಜ್ಯದ ಹಲವೆಡೆ ಇನ್ನೂ ನಾಲ್ಕೈದು ದಿನ ಮಳೆ ಸಾಧ್ಯತೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ