Kannada NewsKarnataka NewsLatest
*IAS ಅಧಿಕಾರಿಗಳ ಬೆನ್ನಲ್ಲೇ ಹಿರಿಯ IPS ಅಧಿಕಾರಿಗಳ ದಿಢೀರ್ ವರ್ಗಾವಣೆ*

ಪ್ರಗತಿವಾಹಿನಿ ಸುದ್ದಿ: ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಐಎ ಎಸ್ ಅಧಿಕಾರಿಗಳ ಬೆನ್ನಲ್ಲೇ ಹಿರಿಯ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಭದ್ರತಾ ವಿಭಾಗದ ಐಜಿಪಿಯಾಗಿದ್ದ ಐಪಿಎಸ್ ಅಧಿಕಾರಿ ಚಂದ್ರಗುಪ್ತ ಅವರನ್ನು ರಾಜ್ಯ ಗುಪ್ತಚರ ವಿಭಾಗದ ಮುಖ್ಯಸ್ಥರನ್ನಾಗಿ ವರ್ಗಾವಣೆ ಮಾಡಲಾಗಿದೆ. ಗುಪ್ತಚರ ವಿಭಾಗದ ಲಾಬೂರಾಮ್ ಅವರನ್ನು ಬೇರೆಡೆ ವರ್ಗಾವಣೆ ಮಾಡಲಾಗಿದೆ.
ಆಂತರಿಕ ಭದ್ರತಾ ವಿಭಾಗದ ಡಿಜಿಪಿ ಪ್ರಣವ್ ಮೊಹಂತಿ ಅವರನ್ನು ಸಿಐಡಿ ಡಿಜಿಪಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ಅವರಿಗೆ ಸಿಐಡಿ (ಸೈಬರ್ ಅಪರಾಧಗಳು) ಡಿಜಿಪಿ ಹುದ್ದೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ.




