Politics

*ಕೃಷ್ಣಾ ಹಾಗೂ ಹಿರಣ್ಯಕೇಶಿ ನದಿಗೆ ನೀರು ಬಿಡಲು ಸಂಸದ ಅಣ್ಣಾಸಾಹೇಬ ಜೊಲ್ಲೆ, ಶಾಸಕಿ ಶಶಿಕಲಾ ಜೊಲ್ಲೆ ಮನವಿ*

ಪ್ರಗತಿವಾಹಿನಿ ಸುದ್ದಿ: ಕೃಷ್ಣಾ ಹಾಗೂ ಹಿರಣ್ಯಕೇಶಿ ನದಿಗೆ ನೀರು ಬಿಡಲು ಸಂಸದ ಅಣ್ಣಾಸಾಹೇಬ ಜೊಲ್ಲೆ ಹಾಗೂ ಮಾಜಿ ಸಚಿವೆ ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ಮನವಿ.

ಮುಂಬೈನ ಭಿವಂಡಿ ಕ್ಷೇತ್ರದ ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಶನಿವಾರ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಪ್ರಚಾರಕ್ಕೆ ಆಗಮಿಸಿದ್ದ ವೇಳೆ ಅವರನ್ನು ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಹಾಗೂ ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ಅವರು ಭೇಟಿ ಮಾಡಿ ನೀರಿನ ಸಮಸ್ಯೆ ನೀಗಿಸುವ ನಿಟ್ಟಿನಲ್ಲಿ ಕಳೆದ ತಿಂಗಳು ಲೋಕಸಭಾ ಕ್ಷೇತ್ರದ ಶಾಸಕರ ನಿಯೋಗ ಭೇಟಿ ಮಾಡಿ, ನೀರು ಬಿಡಲು ಮನವಿ ಮಾಡಿದ್ದು ಮತ್ತೊಮ್ಮೆ ಅದನ್ನು ನೆನೆಪಿಸಿಕೊಟ್ಟು,ಮತ್ತೊಮ್ಮೆ ಮಹಾರಾಷ್ಟ್ರದಿಂದ ಕೃಷ್ಣಾ,ವೇದಗಂಗಾ,ಹಾಗೂ ಹಿಡಕಲ್ ಜಲಾಶಯಕ್ಕೆ ನೀರು ಬಿಡಲು ಮನವಿ ಮಾಡಿದರು.

ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವೀಸ್ ಅವರು ತಕ್ಷಣವೇ ನೀರು ಬಿಡುವುದಾಗಿ ಭರವಸೆ ನೀಡಿದ್ದಾರೆ.

Home add -Advt

Related Articles

Back to top button