Kannada NewsLatest

ಶುದ್ಧ ಕುಡಿಯುವ ನೀರಿನ ಜಲಸಂಗ್ರಹಾಲಯ ಉದ್ಘಾಟಿಸಿದ ಸಂಸದ ಅಣ್ಣಾಸಾಹೇಬ ಜೊಲ್ಲೆ

ಪ್ರಗತಿವಾಹಿನಿ ಸುದ್ದಿ; ಚಿಕ್ಕೋಡಿ: ಸ್ಥವನಿಧಿ ಗ್ರಾಮದಲ್ಲಿ 30 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ಜಲಸಂಗ್ರಹಾಲಯವನ್ನು ಸಂಸದ ಅಣ್ಣಾಸಾಹೇಬ ಜೊಲ್ಲೆ ಉದ್ಘಾಟಿಸಿದರು.

ಚಿಕ್ಕೋಡಿ ಲೋಕಸಭೆ ವ್ಯಾಪ್ತಿಯ ಸ್ಥವನಿಧಿ ಗ್ರಾಮದಲ್ಲಿ, ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯಿಂದ ಮಂಜೂರಾದ ಸುಮಾರು 30 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ, 1 ಲಕ್ಷ ಲೀಟರ್ ನೀರಿನ ಸಂಗ್ರಹಣೆಯ ಸಾಮರ್ಥ್ಯವಿರುವ ಮೇಲ್ಮಟ್ಟದ ಜಲಸಂಗ್ರಹಾಲಯ ಉದ್ಘಾಟಿಸಿ, ಗ್ರಾಮಸ್ಥರನ್ನು ಉದ್ದೇಶಿಸಿ ಮಾತನಾಡಿದ ಅಣ್ಣಾಸಾಹೇಬ ಜೊಲ್ಲೆ ಪ್ರತಿಯೊಬ್ಬ ಪ್ರಜೆಗೂ ಶುದ್ಧ ಕುಡಿಯುವ ನೀರು ಹಾಗೂ ರಾಜ್ಯವನ್ನು ಜಲಸುಭದ್ರ ಮಾಡುವತ್ತ ನಮ್ಮ ಸರ್ಕಾರ ಹೆಜ್ಜೆಯಿಡುತ್ತಿದೆ ಎಂದರು.

ಪ್ರಜಾಬಂಧುಗಳ ಸಧೃಡ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಶುದ್ಧ ಕುಡಿಯುವ ನೀರು ಒದಗಿಸುವುದು ನನ್ನ ಆದ್ಯ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಸರ್ವರೂ ಶುದ್ಧ ಕುಡಿಯವ ನೀರನ್ನು ಬಳಸಿ, ಉತ್ತಮ ಆರೋಗ್ಯ ಕಾಪಾಡಿಕೊಳ್ಳಿ ಎಂದು ಕರೆ ನೀಡಿದರು.

ಬಳಿಕ ಕೋವಿಡ್-19 ಪರಿಹಾರಾರ್ಥವಾಗಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಕಾರ್ಮಿಕ ಇಲಾಖೆ ವತಿಯಿಂದ ಆರ್ಥಿಕವಾಗಿ ಹಿಂದುಳಿದವರಿಗೆ, ಅಂಗವಿಕಲರಿಗೆ, ಬೂತ್ ಕಮಿಟಿ ಅಧ್ಯಕ್ಷರಿಗೆ ಹಾಗೂ ಸದಸ್ಯರಿಗೆ, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು, ಸಹಾಯಕಿಯರಿಗೆ, ಕೆಇಬಿ ಹಾಗೂ ಗ್ರಾಮ ಪಂಚಾಯತ್ ನೌಕರರಿಗೆ ಒಟ್ಟು 86 ಆಹಾರ ಸಾಮಾಗ್ರಿಗಳ ಕಿಟ್ ಗಳನ್ನು ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ ಹಾಲಸಿದ್ದನಾಥ ಸಕ್ಕರೆ ಕಾರ್ಖಾನೆಯ ಉಪಾಧ್ಯಕ್ಷರಾದ ಎಂ. ಪಿ. ಪಾಟೀಲ, ಮಾಜಿ ಜಿಲ್ಲಾ ಪಂಚಾಯತಿ ಸದಸ್ಯರಾದ ಸಿದ್ದು ನರಾಟೆ, ಮಲಗೊಂಡಾ ಪಾಟೀಲ, ಪ್ರಕಾಶ ಶಿಂಧೆ, ಮಧುಕರ ಪಾಟೀಲ, ಸಂಜಯ ಸುತಾರ, ಅರವಿಂದ ಕದಮ, ಎಕನಾಥ ಪಾಟೀಲ, ಕಲ್ಪನಾ ತಳಸಕರ, ಊರಿನ ಗಣ್ಯರು, ಪಕ್ಷದ ಸ್ಥಳೀಯ ಮುಖಂಡರು, ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
 ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button