Latest

ಸಿಎಂ ವಿರುದ್ಧ ಅಸಮಾಧಾನ ಹೊರ ಹಾಕಿದ ಬಿಜೆಪಿ ಸಂಸದ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಿಎಂ ಯಡಿಯೂರಪ್ಪ ವಿರುದ್ಧ ಸ್ವಪಕ್ಷೀಯ ಸಂಸದರೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೊರೊನಾ ನಿರ್ವಹಣೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಏಕಪಕ್ಷೀಯ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ ಎಂದು ಸಂಸದ ಬಿ.ಎನ್.ಬಚ್ಚೇಗೌಡ ಪರೋಕ್ಷವಾಗಿ ಕಿಡಿಕಾರಿದ್ದಾರೆ.

ಕೊರೊನಾ ನಿರ್ವಹಣಾ ಸಭೆಯಲ್ಲಿ ಮಾತನಾಡಿದ ಅವರು, ಕೋವಿಡ್ ನಿರ್ವಹಣೆಯಲ್ಲಿ ಸಂಸದರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಏಕಪಕ್ಷೀಯವಾಗಿ ನಿರ್ಧಾರ ಕೈಗೊಳ್ಳುತ್ತಿದ್ದಾರೆ. ಆದರೂ ಸಂಸದರು ಮನೆಯಲ್ಲಿ ಕುಳಿತಿಲ್ಲ ಎಲ್ಲರೂ ಅವರ ಕೆಲಸ ಮಾಡುತ್ತಿದ್ದಾರೆ ಎಂದರು.

Related Articles

ಸಂಸದರನ್ನು ಹಾಗೂ ವಿಪಕ್ಷದವರು ಸೇರಿದಂತೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯನಿರ್ವಹಿಸಬೇಕು. ತಮಿಳುನಾಡಿನಲ್ಲಿ ಸ್ಟಾಲಿನ್ ಸರ್ವಪಕ್ಷಗಳ ಸಮಿತಿಯನ್ನೇ ರಚಿಸಿದ್ದಾರೆ. ಕೋವಿಡ್ ವಿರುದ್ಧ ಎಲ್ಲರೂ ಒಗ್ಗಟ್ಟಾಗಿ ಹೋರಾಡಬೇಕಿದೆ ಎಂದು ಹೇಳಿದರು.

ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣು

Home add -Advt

Related Articles

Back to top button