Uncategorized

ಕನ್ನಡದಲ್ಲಿ, ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಸಂಸದ ಬಸವರಾಜ ಬೊಮ್ಮಾಯಿ

ಪ್ರಗತಿವಾಹಿನಿ ಸುದ್ದಿ: ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಸಂಸದರಾಗಿ ಬಸವರಾಜ ಬೊಮ್ಮಾಯಿಯವರು ಕನ್ನಡದಲ್ಲಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ಬೀಕರಿಸಿದರು.

ನೂತನ ಸಂಸತ್ ಭವನದಲ್ಲಿ ನಡೆದ ನೂತನ ಸಂಸದರ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಹಾವೇರಿ ಗದಗ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಲೋಕಸಭೆಯ ಹಂಗಾಮಿ ಸಭಾಧ್ಯಕ್ಷ ಭತೃಹರಿ ಮಹತಾಭ್ ಪ್ರಮಾಣ ವಚನ ಬೊಧಿಸಿದರು.

ತಮ್ಮ ಪ್ರಮಾಣ ವಚನದ ಕುರಿತು ಎಕ್ಸ್ ಮಾಡಿರುವ ಸಂಸದ ಬಸವರಾಜ ಬೊಮ್ಮಾಯಿಯವರು, ಇದು ನನ್ನ ರಾಜಕೀಯ ಜೀವನದ ಅತ್ಯಂತ ಹೆಮ್ಮೆಯ ಹಾಗೂ ಮಹತ್ವದ ಕ್ಷಣ. ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಜನರ ಪ್ರತಿನಿಧಿಯಾಗಿ 18 ನೇ ಲೋಕಸಭಾ ಸದಸ್ಯನಾಗಿ ಇಂದು ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಿದೆ‌.
ಭಾರತದ ಪ್ರಜಾಪ್ರಭುತ್ವದ ಸನ್ನಿಧಿಯಲ್ಲಿ ಕರ್ನಾಟಕ ಹಾಗೂ ಕನ್ನಡದ ಧ್ವನಿಯಾಗಲು ಸಹಕರಿಸಿದ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಮತದಾರ ಪ್ರಭುಗಳಿಗೆ ನಾನು ಸದಾ ಚಿರಋಣಿ.
ಭಾರತ ಹಾಗೂ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ನನ್ನ ಪ್ರಯತ್ನ ನಿರಂತರವಾಗಿರಲಿದ್ದು, ಸರ್ವಾಂಗೀಣ ಅಭಿವೃದ್ಧಿಗೆ ಸದಾ ಶ್ರಮಿಸುವೆ‌ ಎಂದು ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button