ಪ್ರಗತಿವಾಹಿನಿ ಸುದ್ದಿ: ಬಿಜೆಪಿ ಸಂಸದ ಜಿ.ಎಂ.ಸಿದ್ದೇಶ್ವರ್ ಗೆ ಜೀವ ಬೆದರಿಕೆ ಇರುವುದಾಗಿ ಸ್ವತ: ಸಂಸದರು ಸ್ಫೋಟಕ ಹೇಳಿಕೆ ನೋಡಿದ್ದಾರೆ.
ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಜಿ.ಎಂ.ಸಿದ್ದೇಶ್ವರ್, ನನಗೆ ಜೀವ ಬೆದರಿಕೆಯಿದೆ. ನನ್ನ ಫ್ರೆಂಡ್ಸ್ ಸರ್ಕಲ್ ನವರೇ ನನನ್ನು ತೆಗೆಯಬೇಕು ಎಂದು ಸಂಚು ರೂಪಿಸಿದ್ದಾರೆ ಎಂದು ಹೇಳಿದ್ದಾರೆ.
ಕಾಲು ತೆಗೆಯಬೇಕು, ವಿಷ ಹಾಕಿ ಸಾಯಿಸಬೇಕು ಎಂದು ಪ್ಲಾನ್ ಮಾಡಿಕೊಂಡಿದ್ದಾರೆ. ಹಾಗಾಗಿ ಎಲ್ಲೇ ಹೋದರೂ ನಾನು ಎಚ್ಚರಿಕೆಯಿಂದ ಇರುತ್ತೇನೆ. ನನಗೆ ಯಾರು ಏನೇ ಕೊಟ್ಟರೂ ತಿನ್ನುವುದಿಲ್ಲ. ನನ್ನನ್ನು ದಾವಣಗೆರೆಯಿಂದ ತೆಗೆಯಲು ಈ ರೀತಿ ಸಂಚು ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ