Belagavi NewsBelgaum NewsKannada NewsKarnataka NewsNational

ರಾಜನಾಥ್ ಸಿಂಗ್ ಭೇಟಿ ಮಾಡಿ ಮನವಿ ಸಲ್ಲಿಸಿದ ಸಂಸದ ಜಗದೀಶ ಶೆಟ್ಟರ್

ಪ್ರಗತಿವಾಹಿನಿ ಸುದ್ದಿ, ನವದೆಹಲಿ: ಬೆಳಗಾವಿ ದಂಡು ಮಂಡಳಿ ವ್ಯಾಪ್ತಿಯ ಎಲ್ಲ ನಾಗರೀಕ ಕ್ಷೇತ್ರವನ್ನು / ಜಮೀನನ್ನು  ರಕ್ಷಣಾ ಸಚಿವಾಲಯದ ನಿರ್ದೇಶನಗಳಡಿ, ಬೆಳಗಾವಿ ಮಹಾನಗರ ಪಾಲಿಕೆಗೆ ಹಸ್ತಾಂತರವಾಗುವ ನಿಟ್ಟಿನಲ್ಲಿ ಪ್ರಸ್ತಾವನೆ ತಯಾರಿಸುವ ಬಗ್ಗೆ ಕಟ್ಟು ನಿಟ್ಟಿನ ಸೂಚನೆಯನ್ನು ದಂಡು ಮಂಡಳಿ ಅಧಿಕಾರಿಗಳಿಗೆ ನೀಡುವ ಬಗ್ಗೆ ಚರ್ಚಿಸಲು ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಇವರನ್ನು ಬೆಳಗಾವಿ ಲೋಕಸಭಾ ಸದಸ್ಯ ಜಗದೀಶ ಶೆಟ್ಟರ ಇವರು ನವ-ದೆಹಲಿಯಲ್ಲಿ ಭೇಟಿ ಮಾಡಿ ಮನವಿ ಅರ್ಪಿಸಿದರು.

ಬೆಳಗಾವಿ ದಂಡು ಮಂಡಳಿ ಇದರ ವ್ಯಾಪ್ತಿಯ ನೋಟಿಫೈಡ ಸಿವಿಲ್ ಏರಿಯಾ ಮಾತ್ರ ಅಧಿಕಾರಿಗಳು ಗುರುತಿಸಿ ಉಳಿದ ಸಿವಿಲ್ ಏರಿಯಾಗಳನ್ನು ಮಹಾನಗರ ಪಾಲಿಕೆಗೆ ಹಸ್ತಾಂತರಿಸುವ ಬಗ್ಗೆ ಕರಡು ಪ್ರಸ್ತಾವನೆಯಲ್ಲಿ ಪ್ರಸ್ತಾಪ ಮಾಡಿರಲಿಲ್ಲ. ಅಂದರೆ ಕೇವಲ “ಬಜಾರ ಏರಿಯಾ” ಮಾತ್ರ ಪರಿಗಣಿಸಿ “ಬಂಗಲೋ ಏರೊಯಾ” ಮಾಡಿರಿಲಿಲ್ಲ. ಈ ಕುರಿತು ದಿನಾಂಕ 06.07.2024 ರಂದು ಜರುಗಿದ ದಂಡು ಮಂಡಳಿ ಸಭೆಯಲ್ಲಿ ಖುದ್ದಾಗಿ ಹಾಜರಿದ್ದು ಗಮನಕ್ಕು ತಂದರೂ ಅಧಿಕಾರಿಗಳು ಸಕರಾತ್ಮಕವಾಗಿ ಸ್ಪಂದಿಸಿರಲಿಲ್ಲ. ಅಲ್ಲದೆ ಸಾರ್ವಜನಿಕ ವಲಯದಲ್ಲಿ ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು ಎಂದು ಸಂಸದರು ತಿಳಿಸಿದರು.

ಈ ಹಿನ್ನೆಲೆಯಲ್ಲಿ ನವ-ದೆಹಲಿಯಲ್ಲಿ ಇಂದು ಜಗದೀಶ ಶೆಟ್ಟರ ರಕ್ಷಣಾ ಸಚಿವ ರಾಜನಾಥ ಸಿಂಗ್ ಇವರನ್ನು ಭೇಟಿ ಮಾಡಿ ಸುಧೀರ್ಘವಾಗಿ ಈ ಕುರಿತು ಚರ್ಚಿಸಿ, ರಕ್ಷಣಾ ಸಚಿವಾಲಯದ ಆದೇಶಗಳಂತೆ ಬೆಳಗಾವಿ ದಂಡು ಮಂಡಳಿ ವ್ಯಾಪ್ತಿಯ ಎಲ್ಲ ಸಿವಿಲ್ ಏರೀಯಗಳನ್ನು ಗುರುತಿಸಿ “ಕರಡು ಪ್ರಸ್ತಾವನೆಯನ್ನು ತಯಾರಿಸಿ ಕರ್ನಾಟಕ ರಾಜ್ಯ ಸರಕಾರಕ್ಕೆ ಸಲ್ಲಿಸುವಂತೆ ನೋಡಿಕೊಳ್ಳಲು ವಿನಂತಿದರು.

ಎಲ್ಲ ವಿಷಯವನ್ನು ಆಲಿಸಿದ ರಕ್ಷಣಾ ಸಚಿವರು, ಸಕಾರಾತ್ಮಕವಾಗಿ ಸ್ಪಂದಿಸುತ್ತಾ ರಕ್ಷಣಾ ಸಚಿವಾಲಯದ ನಿರ್ದೇಶನಗಳಡಿಯಲ್ಲಿಯೇ ಪ್ರಸ್ತಾಪಿತ ಕರಡು ಪ್ರಸ್ತಾವನೆ ತಯಾರಿಸುವ ಬಗ್ಗೆ ಕಟ್ಟು ಸೂಚನೆಯನ್ನು ಬೆಳಗಾವಿ ದಂಡು ಮಂಡಳಿ ಅಧಿಕಾರಿಗಳಿಗೆ ನೀಡುವುದಾಗಿ ರಾಜನಾಥ ಸಿಂಗ್ ಭರವಸೆಯನ್ನು ನೀಡಿದ್ದಾರೆ ಎಂದು ಶೆಟ್ಟರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button