
ಪ್ರಗತಿವಾಹಿನಿ ಸುದ್ದಿ: ಕೊಪ್ಪಳ ಲೋಕಸಭಾ ಕ್ಷೇತ್ರದ ಟಿಕೆಟ್ ಸಿಗದ ಹಿನ್ನಲೆಯಲ್ಲಿ ಅಸಮಾಧಾನಗೊಂಡಿದ್ದ ಸಂಸದ ಕರಡಿ ಸಂಗಣ್ಣ ಬಿಜೆಪಿಗೆ ಗುಡ್ ಬೈ ಹೇಳಿದ್ದಾರೆ.
ಕರಡಿ ಸಂಗಣ್ಣನವರು, ಬಿಜೆಪಿ ತೊರೆದು ಕಾಂಗ್ರೆಸ್ ಸೇರಲಿದ್ದಾರೆ ಎಂದು ಇಂದು ಬೆಳಗ್ಗೆ ಸಂಸದ ಶಿವರಾಜ್ ತಂಗಡಗಿ ಅವರು ತಿಳಿಸಿದ್ದರು. ಇದರ ಬೆನ್ನಲ್ಲೇ ಬಿಜೆಪಿ ತೊರೆದಿರುವ ಕರಡಿ ಸಂಗಣ್ಣ ತಮ್ಮ ಸಂಸದ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಜೊತೆಗೆ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ಸಲ್ಲಿಸಿದ್ದಾರೆ.
ಸ್ಪೀಕರ್ ಓಂ ಬಿರ್ಲಾ ಗೆ ಮೇಲ್ ಮೂಲಕ ರಾಜೀನಾಮೆ ಸಲ್ಲಿಸಿರುವ ಕರಡಿ ಸಂಗಣ್ಣ, ನಾಳೆ ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆ ಆಗಬಹುದು ಎನ್ನಲಾಗಿದೆ.