
ಪ್ರಗತಿವಾಹಿನಿ ಸುದ್ದಿ, ಕೊಪ್ಪಳ: ವಿಧಾನಸಭೆ ಟಿಕೆಟ್ ಕೇಳಿದ್ದ ಸಂಸದ ಕರಡಿ ಸಂಗಣ್ಣ ಅವರಿಗೆ ಬಿಜೆಪಿ ಟಿಕೆಟ್ ನೀಡದ ಹಿನ್ನೆಲೆಯಲ್ಲಿ ಅವರು ಸಂಸದ ಸ್ಥಾನ ಮತ್ತು ಬಿಜೆಪಿಗೆ ರಾಜಿನಾಮೆ ನೀಡಲು ನಿರ್ಧರಿಸಿದ್ದಾರೆ ಎಂದು ಅವರ ಆಪ್ತಮೂಲಗಳು ತಿಳಿಸಿವೆ.
ಕರಡಿ ಸಂಗಣ್ಣ ಇನ್ನು ಸ್ವಲ್ಪಹೊತ್ತಿನಲ್ಲೇ ಬೆಂಬಲಿಗರ ಸಭೆ ಕರೆದಿದ್ದು, ಸಭೆಯ ಬಳಿಕ ರಾಜಿನಾಮೆ ನಿರ್ಧಾರ ಪ್ರಕಟಿಸಲಿದ್ದಾರೆ ಎನ್ನಲಾಗಿದೆ.
ಕರಡಿ ಸಂಗಣ್ಣ ಬಿಜೆಪಿಯಿಂದ ವಿಧಾನಸಭೆ ಟಿಕೆಟ್ ಕೇಳಿದ್ದರು. ಆದರೆ ಅವರಿಗೆ ಟಿಕೆಟ್ ನಿರಾಕರಿಸಲಾಗಿತ್ತು. ಇದರಿಂದ ತೀವ್ರ ಬೇಸತ್ತಿರುವ ಅವರು ಬಿಜೆಪಿಗೆ ರಾಜಿನಾಮೆ ನೀಡಿ ಅನ್ಯ ಪಕ್ಷಗಳಿಂದ ಅಥವಾ ಪಕ್ಷೇತರರಾಗಿ ವಿಧಾನಸಭೆಗೆ ಸ್ಪರ್ಧಿಸುವ ಸಾಧ್ಯತೆ ಇದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ