Belagavi NewsBelgaum NewsKannada NewsKarnataka NewsPolitics

*ಮಹಾರಾಷ್ಟ್ರ- ಕರ್ನಾಟಕ ಹೆದ್ದಾರಿಯ ಕಾಮಗಾರಿ ವೀಕ್ಷಿಸಿದ ಸಂಸದೆ ಪ್ರಿಯಂಕಾ ಜಾರಕಿಹೊಳಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮಹಾರಾಷ್ಟ್ರದ ದೇವಗಾಂವ್‌ನಿಂದ ಕರ್ನಾಟಕದ ವಿಜಯಪುರ, ಅಥಣಿ, ಚಿಕ್ಕೋಡಿ, ಸಂಕೇಶ್ವರ ಹಾಗೂ ಗೋಟೂರವರೆಗೆ ನಿರ್ಮಾಣವಾಗುತ್ತಿರುವ ನೂತನ ರಾಷ್ಟ್ರೀಯ ಹೆದ್ದಾರಿ NH-548B ಕಾಮಗಾರಿಯನ್ನು ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು ಕವಲಗುಡ್ಡ ಸಮೀಪ ಪರಿಶೀಲಿಸಿಸಿದರು.

ಅಂದಾಜು ₹2,800 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಈ ಮಹತ್ವಾಕಾಂಕ್ಷಿ ರಾಷ್ಟ್ರೀಯ ಹೆದ್ದಾರಿಯ ಒಟ್ಟು ಉದ್ದ ಸುಮಾರು 572ಕಿ.ಮೀ. ಆಗಿದ್ದು, ಕರ್ನಾಟಕ ಭಾಗದಲ್ಲಿ ಸುಮಾರು 170 ಕಿ.ಮೀ. ರಸ್ತೆ ನಿರ್ಮಾಣವಾಗಲಿದೆ. ಇದರ ಪ್ರಮುಖ ಭಾಗ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಹಾದುಹೋಗಲಿದ್ದು, ಈ ಪ್ರದೇಶದ ಸಂಪರ್ಕ ವ್ಯವಸ್ಥೆ ಹಾಗೂ ಆರ್ಥಿಕ ಅಭಿವೃದ್ಧಿಗೆ ಹೊಸ ಚೈತನ್ಯ ನೀಡಲಿದೆ.

ಈ ಸಂದರ್ಭದಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಅಧಿಕಾರಿಗಳೊಂದಿಗೆ ಕಾಮಗಾರಿಯ ಪ್ರಗತಿ ಕುರಿತು ಸಮಗ್ರ ಚರ್ಚೆ ನಡೆಸಲಾಯಿತು. ಕಾಮಗಾರಿಯ ಗುಣಮಟ್ಟವನ್ನು ಕಟ್ಟುನಿಟ್ಟಾಗಿ ಕಾಪಾಡಿಕೊಂಡು, ನಿಗದಿತ ಅವಧಿಯೊಳಗೆ ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button