ಪ್ರಗತಿವಾಹಿನಿ ಸುದ್ದಿ: ವಿಜಯಪುರ ಕ್ಷೇತ್ರದ ಬಿಜೆಪಿ ಸಂಸದ ರಮೇಶ್ ಜಿಗಜಿಣಗಿ ಮತ್ತೆ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.
ರಮೇಶ್ ಜಿಗಜಿಣಗಿ ಕೆಲ ದಿನಗಳ ಹಿಂದೆ ಅನಾರೋಗ್ಯಕ್ಕೀಡಾಗಿ ಚೇತರಿಸಿಕೊಂಡಿದ್ದರು. ಇದೀಗ ಮತ್ತೆ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದ್ದು, ಅವರನ್ನು ಬೆಳಗಾವಿಯ ಕೆ ಎಲ್ ಇ ಆಸ್ಪತ್ರೆಗೆ ದಾಖಲಿಸಲಾಗಿದೆ.
ತೀವ್ರ ಅನಾರೋಗ್ಯ ಹಿನ್ನೆಲೆಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ತಿಳಿದುಬಂದಿದೆ. ಕಳೆದ ತಿಂಗಳು ಉಸಿರಾಟದ ಸಮಸ್ಯೆಯಿಂದ ಜಿಗಜಿಣಗಿ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಗುಣಮುಖರಾಗಿದ್ದರು. ಇದೀಗ ಮತ್ತೆ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ