Latest

ಮತ್ತೆ ಸಿಎಂ ರಾಜಕೀಯ ಕಾರ್ಯದರ್ಶಿಗಳಾದ ರೇಣುಕಾಚಾರ್ಯ, ಡಿ.ಎನ್.ಜೀವರಾಜ್

ಪ್ರಗತಿವಾಹಿನಿ ಸುದ್ದಿ: ಬೆಂಗಳೂರು: ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಮತ್ತೆ ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ. ರೇಣುಕಾಚಾರ್ಯ ಹಾಗೂ ಮಾಜಿ ಸಚಿವ ಡಿ.ಎನ್.ಜೀವರಾಜ್ ಅವರನ್ನು ಸಿಎಂ ರಾಜಕೀಯ ಕಾರ್ಯದರ್ಶಿಗಳನ್ನಾಗಿ ನೇಮಕ ಮಾಡಲಾಗಿದೆ.

ಮುಖ್ಯಮಂತ್ರಿಗಳ ಕಾರ್ಯದರ್ಶಿಗಳಿಗೆ ಸಂಪುಟ ದರ್ಜೆಯ ಸ್ಥಾನಮಾನದೊಂದಿಗೆ ಸಂಪುಟ ದರ್ಜೆಯ ಸಚಿವರಿಗೆ ಅನ್ವಯವಾಗುವ ಎಲ್ಲಾ ಸೌಲಭ್ಯಗಳನ್ನು ನೀಡಿ ಸರ್ಕಾರ ಆದೇಶ ಹೊರಡಿಸಿದೆ.

Home add -Advt

ಬಿ.ಎಸ್.ಯಡಿಯೂರಪ್ಪ ಆಡಳಿತದ ಅವಧಿಯಲ್ಲಿಯೂ ಈ ಇಬ್ಬರು ನಾಯಕರು ಸಿಎಂ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದರು. ಇದೀಗ ಬೊಮ್ಮಾಯಿ ಕೂಡ ರೇಣುಕಾಚಾರ್ಯ ಹಾಗೂ ಜೀವರಾಜ್ ಅವರನ್ನು ಸಿಎಂ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿಕೊಂಡಿದ್ದಾರೆ.

Related Articles

Back to top button