Election NewsKannada NewsKarnataka NewsNationalPolitics

*ಸಂಸದ ಸಂಗಣ್ಣ ಕರಡಿ ಕಾಂಗ್ರೆಸ್ ಸೇರ್ಪಡೆ ಆಗೋದು ಪಕ್ಕಾ: ಸಚಿವ ಶಿವರಾಜ್ ತಂಗಡಗಿ*

ಪ್ರಗತಿವಾಹಿನಿ ಸುದ್ದಿ: ಸಂಸದ ಸಂಗಣ್ಣ ಕರಡಿ ಕಾಂಗ್ರೆಸ್ ಸೇರ್ಪಡೆ ಆಗೋದು ಪಕ್ಕಾ ಆಗಿದೆ. ಯಾವುದೇ ಬೇಡಿಕೆ ಇಲ್ಲದೆ ಪಕ್ಷಕ್ಕೆ ಬರಲು ಒಪ್ಪಿದ್ದಾರೆ ಎಂದು ಕೊಪ್ಪಳದಲ್ಲಿ ಸಚಿವ ಶಿವರಾಜ ತಂಗಡಗಿ ಹೇಳಿಕೆ ನೀಡಿದ್ದಾರೆ. 

ಕೊಪ್ಪಳದಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು, ಸಂಸದ ಸಂಗಣ್ಣ ಕರಡಿ 

Home add -Advt

ಸಾಮಾನ್ಯ ಕಾರ್ಯಕರ್ತರಾಗಿ ಪಕ್ಷ ಸೇರ್ಪಡೆ ಆಗುತ್ತಾರೆ.  ಇಂದು ಬೆಂಗಳೂರಿಗೆ ಹೋಗುತ್ತೇವೆ. ನಾಳೆ‌ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ ಅವರನ್ನು ಭೇಟಿ ಮಾಡುತ್ತೇವೆ ಎಂದು ತಿಳಿಸಿದರು. 

ಕಾಂಗ್ರೆಸ್ ಗೆ ಕರೆದು ಮೂಲೆ ಗುಂಪು ಮಾಡುತ್ತಾರೆ ಎಂಬ ವಿಚಾರವಾಗಿ ಮಾತನಾಡಿದ ಅವರು,  ನಾವು ಯಾರನ್ನು ಮೂಲೆ ಗುಂಪು ಮಾಡಿಲ್ಲ, ಹಿಂದೆ ಪಕ್ಷಕ್ಕೆ ಕರೆತಂದವರಿಗೆ ಪಕ್ಷದ ಜವಾಬ್ದಾರಿಯನ್ನು ಕೊಟ್ಟಿದ್ದೇವೆ.‌ ಬಿಜೆಪಿಯಲ್ಲಿ ಮೂಲೆ ಗುಂಪಾಗಿರೋರು ಈ ರೀತಿ ಹೇಳುತ್ತಿದ್ದಾರೆ.‌ ಸಂಗಣ್ಣ ಅವರು, ಯಾವುದೇ ಬೇಡಿಕೆ ಇಲ್ಲದೆ ಸಾಮಾನ್ಯ ಕಾರ್ಯಕರ್ತರಾಗಿ ಪಕ್ಷಕ್ಕೆ ಬರುತ್ತಾರೆ ಎಂದು ಸಚಿವ ಶಿವರಾಜ ತಂಗಡಗಿ ಹೇಳಿಕೆ ನೀಡಿದ್ದಾರೆ.‌

Related Articles

Back to top button