For Rent- Torgal
Emergency Service

*ಬಿಜೆಪಿ ಸಂಸದನ ಕಾರು ಭೀಕರ ಅಪಘಾತ; ನಾಲ್ವರಿಗೆ ಗಂಭೀರ ಗಾಯ*

ಪ್ರಗತಿವಾಹಿನಿ ಸುದ್ದಿ; ಪಾಟ್ನಾ: ಬಿಜೆಪಿ ಸಂಸದ ಸತೀಶ್ ಚಂದ್ರ ದುಬೆ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿರುವ ಘಟನೆ ಬಿಹರದ ಪಾಟ್ನಾದಲ್ಲಿ ನಡೆದಿದೆ.

ಅಪಘಾತದಲ್ಲಿ ಸಂಸದ ಸತೀಶ್ ಚಂದ್ರ ದುಬೆ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಲ್ಲಿ ಸಂಸದರ ಕಾರು ಚಾಲಕ, ಭದ್ರತಾ ಸಿಬ್ಬಂದಿ ಸೇರಿ ಒಟ್ಟು ನಾಲ್ವರು ಗಾಯಗೊಂಡಿದ್ದಾರೆ.

ಪಾಟ್ನಾದ ಗಾಂಧಿಸೇತು ಸೇತುವೆ ಬಳಿ ಸಂಸದರ ಕಾರು ಟ್ರಕ್ ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಸಂಸದರು ಸೇರಿ ನಾಲ್ವರು ಗಾಯಗೊಂಡಿದ್ದಾರೆ. ಹಾಜಿಪುರದಿಂದ ಪಾಟ್ನಾಗೆ ಬರುತ್ತಿದ್ದಾಗ ಈ ಘಟನೆ ನಡೆದಿದೆ. ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.

Beereshwara 27
Bottom Ad 1
Bottom Ad 2

You cannot copy content of this page