
ಪ್ರಗತಿವಾಹಿನಿ ಸುದ್ದಿ: ಕೆಲ ದಿನಗಳ ಹಿಂದೆ ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿರುವ ಬಿಜೆಪಿ ಸಂಸದ ವಿ. ಶ್ರೀನಿವಾಸ್ ಪ್ರಸಾದ್ ಅವರ ಆರೋಗ್ಯ ಸ್ಥಿತಿ ಗಂಭಿರವಾಗಿದ್ದು, ಐಸಿಯು ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿರುವ ಅವರು, ಏ. 22ರಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ವೈದ್ಯಕೀಯ ತಜ್ಞರ ತಂಡವು ಅವರ ಆರೋಗ್ಯದ ಮೇಲ್ವಿಚಾರಣೆ ನಡೆಸುತ್ತಿದೆ. ವೈದ್ಯಕೀಯ ಆಮ್ಲಜನಕದ ಸಂಪರ್ಕದೊಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಐಸಿಯು ಘಟಕದಲ್ಲಿ ಅವರ ಆರೋಗ್ಯದ ಮೇಲೆ ನಿಗಾ ಇಡಲಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.