Latest

ಅಭಿಷೇಕ್ ಅಂಬರೀಷ್ ರಾಜಕೀಯಕ್ಕೆ ಬರ್ತಾರಾ? ಸಂಸದೆ ಸುಮುಲತಾ ಸ್ಪಷ್ಟನೆ

ಪ್ರಗತಿವಾಹಿನಿ ಸುದ್ದಿ; ಮಂಡ್ಯ: ನಾವು ಯಾವುದೇ ಕಾರಣಕ್ಕೂ ಕುಟುಂಬ ರಾಜಕಾರಣವನ್ನು ಮಾಡುವುದಿಲ್ಲ ಎಂದು ಸಂಸದೆ ಸುಮಲತಾ ಶಪಥ ಮಾಡಿದ್ದಾರೆ.

ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿದ ಸುಮಲತಾ ಅಂಬರೀಶ್, ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ತಮ್ಮ ಬೆಂಬಲ ಘೋಷಿಸಿದರು. ಈ ವೇಳೆ ಪುತ್ರ ಅಭಿಷೇಕ್ ರಾಜಕೀಯ ವಿಚಾರವಾಗಿಯೂ ಮಾತನಾಡಿದ ಸುಮಲತಾ, ನಾನಾಗಲಿ, ಅಂಬರೀಷ್ ಆಗಲಿ, ಅಭಿಷೇಕ್ ಅಗಲಿ ಕುಟುಂಬ ರಾಜಕಾರಣ ಮಾಡಲ್ಲ, ಚಾಮುಂಡಿ ತಾಯಿ ಮೇಲಾಣೆ ಕುಟುಂಬ ರಾಜಕೀಯ ಮಾಡುವುದಿಲ್ಲ ಎಂದು ಹೇಳಿದರು.

ಒಂದು ವಿಷಯ ಸ್ಪಷ್ಟಪಡಿಸಲು ಇಚ್ಚಿಸುತ್ತೇನೆ. ನಾನು ರಾಜಕಾರಣದಲ್ಲಿ ಇರುವವರೆಗೂ ನನ್ನ ಮಗ ಅಭಿಷೇಕ್ ರಾಜಕಾರಣಕ್ಕೆ ಬರುವುದಿಲ್ಲ. ಅಭಿಷೇಕ್ ಚುನಾವಣೆಯಲ್ಲಿ ಸ್ಪರ್ಧಿಸುವುದಾದರೆ ಮಂಡ್ಯದಿಂದ ಟಿಕೆಟ್ ಕೊಡುವುದಾಗಿ ಎರಡು ರಾಜಕೀಯ ಪಕ್ಷಗಳು ಆಹ್ವಾನ ನೀಡಿದ್ದವು. ಆದರೆ ನಾನು ಅದನ್ನು ನಿರಾಕರಿಸಿದೆ. ಸಧ್ಯಕ್ಕೆ ಅಭಿಷೇಕ್ ನನ್ನು ರಾಜಕೀಯಕ್ಕೆ ತರುವ ವಿಚಾರವಿಲ್ಲ. ನಾನಿರುವವರೆಗೆ ಆತ ರಾಜಕೀಯಕ್ಕೆ ಬರುವುದಿಲ್ಲ ಎಂದು ತಿಳಿಸಿದ್ದೆನೆ ಎಂದರು.

ನಾನು ಎಲ್ಲಿಯೂ ಅಬಿಷೇಕ್ ರಾಜಕೀಯದ ಬಗ್ಗೆ ಮಾತನಾಡಿಲ್ಲ. ಆ ಬಗ್ಗೆ ಯೋಚಿಸಿಯೂ ಇಲ್ಲ. ಅಭಿಷೇಕ್ ರಾಜಕೀಯಕ್ಕೆ ಬರುವುದಿಲ್ಲ ಎಂಬುದನ್ನು ಮತ್ತೊಮ್ಮೆ ಸ್ಪಷ್ಟಪಡಿಸುತ್ತೇನೆ ಎಂದರು.

Home add -Advt

Related Articles

Back to top button