Kannada NewsKarnataka NewsLatestPolitics

*ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾದ ಸುಮಲತಾ ಅಂಬರೀಶ್*

ಪ್ರಗತಿವಾಹಿನಿ ಸುದ್ದಿ: ಮಂಡ್ಯ ಲೋಕಸಭಾ ಬಿಜೆಪಿ ಟಿಕೆಟ್ ಕೈತಪ್ಪಿದ್ದಕ್ಕೆ ಬೇಸರದಿಂದ ಮೌನಕ್ಕೆ ಶರಣಾಗಿದ್ದ ಸಂಸದೆ ಸುಮಲತಾ ಅಂಬರೀಶ್ ಕೊನೆಗೂ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ಬೆಂಬಲಿಸಿದ್ದ ಸಂಸದೆ ಸುಮಲತಾ, ಮಂಡ್ಯದಿಂದ ಬಿಜೆಪಿ ಲೋಕಸಭಾ ಟಿಕೆಟ್ ಆಕಾಂಕ್ಷಿ ಆಗಿದ್ದರು. ಆದರೆ ಬಿಜೆಪಿ-ಜೆಡಿಎಸ್ ಮೈತ್ರಿಯಿಂದಾದ ಬದಲಾವಣೆ ಪರಿಣಾಮ ಸುಮಲತಾಗೆ ಬಿಜೆಪಿ ಟಿಕೆಟ್ ಕೈತಪ್ಪಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಪಾಲಾಗಿದೆ.

ಟಿಕೆಟ್ ಕೈತಪ್ಪಿದ್ದಕ್ಕೆ ಬೇಸರಗೊಂಡಿದ್ದ ಸುಮಲತಾ ಮನವೊಲಿಕೆ ನಿಟ್ಟಿನಲ್ಲಿ ಬಿಜೆಪಿ ನಾಯಕರು ಯಶಸ್ವಿಯಾಗಿದ್ದಾರೆ. ಇದೀಗ ಸಂಸದೆ ಸುಮಲತಾ ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಬಿಜೆಪಿ ಉಸ್ತುವಾರಿ ರಾಧಾ ಮೋಹನ್, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿಗೆ ಸೇರ್ಪಡೆಯಾದರು.

Home add -Advt

ಇದೇ ವೇಳೆ ಕ್ರಿಕೆಟಿಗ ದೊಡ್ಡ ಗಣೇಶ್, ಕೊಪ್ಪಳ ಮಾಜಿ ಸಂಸದ ಶಿವರಾಮಗೌಡ ಕೂಡ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.


Related Articles

Back to top button