*ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾದ ಸುಮಲತಾ ಅಂಬರೀಶ್*

ಪ್ರಗತಿವಾಹಿನಿ ಸುದ್ದಿ: ಮಂಡ್ಯ ಲೋಕಸಭಾ ಬಿಜೆಪಿ ಟಿಕೆಟ್ ಕೈತಪ್ಪಿದ್ದಕ್ಕೆ ಬೇಸರದಿಂದ ಮೌನಕ್ಕೆ ಶರಣಾಗಿದ್ದ ಸಂಸದೆ ಸುಮಲತಾ ಅಂಬರೀಶ್ ಕೊನೆಗೂ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ಬೆಂಬಲಿಸಿದ್ದ ಸಂಸದೆ ಸುಮಲತಾ, ಮಂಡ್ಯದಿಂದ ಬಿಜೆಪಿ ಲೋಕಸಭಾ ಟಿಕೆಟ್ ಆಕಾಂಕ್ಷಿ ಆಗಿದ್ದರು. ಆದರೆ ಬಿಜೆಪಿ-ಜೆಡಿಎಸ್ ಮೈತ್ರಿಯಿಂದಾದ ಬದಲಾವಣೆ ಪರಿಣಾಮ ಸುಮಲತಾಗೆ ಬಿಜೆಪಿ ಟಿಕೆಟ್ ಕೈತಪ್ಪಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಪಾಲಾಗಿದೆ. ಟಿಕೆಟ್ ಕೈತಪ್ಪಿದ್ದಕ್ಕೆ ಬೇಸರಗೊಂಡಿದ್ದ ಸುಮಲತಾ ಮನವೊಲಿಕೆ ನಿಟ್ಟಿನಲ್ಲಿ ಬಿಜೆಪಿ ನಾಯಕರು ಯಶಸ್ವಿಯಾಗಿದ್ದಾರೆ. ಇದೀಗ ಸಂಸದೆ ಸುಮಲತಾ ಬೆಂಗಳೂರಿನ … Continue reading *ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾದ ಸುಮಲತಾ ಅಂಬರೀಶ್*