Latest

ಆ ಯಮ್ಮ ಏನೂ ಮಾಡಲ್ಲ, ಯಾವುದೇ ಕೆಲಸ ಇದ್ದರೂ ನನಗೆ ಹೇಳಿ ನಾನು ಮಾಡಿಕೊಡುತ್ತೇನೆ ಎಂದ ಸಂಸದ

ಪ್ರಗತಿವಾಹಿನಿ ಸುದ್ದಿ; ಮಂಡ್ಯ: ಸಂಸದೆ ಸುಮಲತಾ ಕ್ಷೇತ್ರದಲ್ಲಿ ಯಾವುದೇ ಕೆಲಸ ಮಾಡುವುದಿಲ್ಲ, ಮಂಡ್ಯದ ಕೆಲಸ ಏನಿದ್ದರೂ ನನಗೆ ಹೇಳಿ ಎಂದು ಬಿಜೆಪಿ ಸಂಸದ ಪ್ರತಾಪ್ ಸಿಂಹ ಟೀಕಿಸಿದ್ದಾರೆ.

ಬೆಂಗಳೂರು-ಮೈಸೂರು ದಶಪಥ ರಸ್ತೆ ಕಾಮಗಾರಿ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದೆ ಸುಮಲತಾ ಅಂಬರೀಶ್ ಯಾವುದೇ ಕೆಲಸ ಮಾಡಲು ಬಿಡುವುದಿಲ್ಲ ಎಂದು ಅಧಿಕಾರಿಯೊಬ್ಬರು ಪ್ರತಾಪ್ ಸಿಂಹ ಅವರಿಗೆ ದೂರು ನೀಡಿದ್ದಾರೆ. ಈ ವೇಳೆ ಪ್ರತಿಕ್ರಿಯಿಸಿರುವ ಪ್ರತಾಪ್ ಸಿಂಹ, ಹೆಚ್.ಡಿ ದೇವೇಗೌಡರ ಕುಟುಂಬವನು ಸೋಲಿಸಬೇಕು ಎಂದು ಮಂಡ್ಯದಲ್ಲಿ ಸುಮಲತಾ ಅವರನ್ನು ಗೆಲ್ಲಿಸಿದರು. ಆ ಯಮ್ಮ ಏನೂ ಕೆಲಸ ಮಾಡಲ್ಲ. ಅಲ್ಲದೇ ಮಂಡ್ಯದ ಏನೇ ಕೆಲಸವಾಗಬೇಕೆಂದರೂ ನನಗೆ ಹೇಳಿ ಎಂದಿದ್ದಾರೆ.

ಪ್ರತಾಪ್ ಸಿಂಹ ಹೇಳಿಕೆಗೆ ಇದೀಗ ಸುಮಲತಾ ಅಂಬರೀಶ್ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Home add -Advt

Related Articles

Back to top button