
ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ನಿವಾಸದ ಎದುರು ಧರಣಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ತೇಜಸ್ವಿ ಸೂರ್ಯ ಅವರನ್ನು ದೆಹಲಿ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.
ಸಿಎಂ ಮನೆ ಮುಂದೆ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ತೇಜಸ್ವಿ ಸೂರ್ಯ ಅವರಿಗೆ ದೆಹಲಿ ಪೊಲೀಸರು ವಾಟ್ಸಪ್ ಮೂಲಕ ನೋಟೀಸ್ ನೀಡಿದ್ದರು. ದೆಹಲಿಯ ಅಶೋಕ್ ರಸ್ತೆಯಲ್ಲಿರುವ ತೇಜಸ್ವಿ ಸೂರ್ಯ ನಿವಾಸಕ್ಕೆ ತೆರಳಿದ ದೆಹಲಿ ಪೊಲೀಸರು ಎರಡು ಗಂಟೆಗಳ ಕಾಲ ವಿಚಾರಣೆ ನಡೆಸಿದ್ದಾರೆ.
ಪ್ರತಿಭಟನೆಯ ಸಿಸಿಟಿವಿ ಕ್ಯಾಮರಾ ದೃಶ್ಯಾವಳಿಗಳನ್ನು ತೋರಿಸಿ ವಿಚಾರಣೆ ನಡೆಸಿದ್ದಾರೆ. ಮಾರ್ಚ್ 30ರಂದು ತೇಜಸ್ವಿ ಸೂರ್ಯ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಸಿಎಂ ಕೇಜ್ರಿವಾಲ್ ನಿವಾಸದ ಮೇಲೆ ದಾಳಿ ನಡೆಸಿ ಪ್ರತಿಭಟನೆ ನಡೆಸಿದ್ದರು. ಪ್ರಕರಣ ಸಂಬಂಧ 8 ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದರು.
ಇದೀಗ ಪ್ರತಿಭಟನೆಗೆ ಸಂಬಂಧಿಸಿದಂತೆ ಸಂಸದ ತೇಜಸ್ವಿ ಸೂರ್ಯ ಅವರನ್ನು ವಿಚಾರಣೆ ನಡೆಸಲಾಗಿದೆ.
ಶಾಸಕ ಜಮೀರ್ ಅಹ್ಮದ್ ಗೆ ACB ಶಾಕ್
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ