Latest

ಪ್ರವಾಹಕ್ಕೆ ಮುಳುಗಿದ ಬೆಂಗಳೂರು; ಹೋಟೆಲ್ ನಲ್ಲಿ ಮಸಾಲೆ ದೋಸೆ ತಿಂದು ಸಂಭ್ರಮಿಸಿದ ಸಂಸದ ತೇಜಸ್ವಿ ಸೂರ್ಯ;

ಮಕ್ಕಳಾಟ ಆಡಿಕೊಂಡಿದ್ದ ಅಪ್ರಬುದ್ಧರನ್ನು ಸಂಸದರನ್ನಾಗಿಸಿದರೆ ಇನ್ನೇನು ನಿರೀಕ್ಷಿಸಲು ಸಾಧ್ಯ? ಎಂದ ಕಾಂಗ್ರೆಸ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯಾದ್ಯಂತ ವರುಣನ ಆರಭಟಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. ಅದರಲ್ಲೂ ರಾಜಧಾನಿ ಬೆಂಗಳೂರಿನಲ್ಲಿ ರಣ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿಯುಂಟಾಗಿದ್ದು, ಸಿಲಿಕಾನ್ ಸಿಟಿ ಜನ ಬದುಕು ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ. ಇಂತಹ ಸಂದರ್ಭದಲ್ಲಿ ಕ್ಷೇತ್ರದ ಜನರ ಸಂಕಷ್ಟಕ್ಕೆ ಸ್ಪಂದಿಸುವುದನ್ನು ಬಿಟ್ಟು ಸಂಸದ ತೇಜಸ್ವಿ ಸೂರ್ಯ ಹೋಟೆಲ್ ನಲ್ಲಿ ಮಸಾಲೆ ದೋಸೆ ಸವಿದು ಸಂಭ್ರಮಿಸಿದ್ದು ಸಾರ್ವಜನಿಕರು, ವಿಪಕ್ಷದವರು ಹಿಗ್ಗಾ ಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ.

Home add -Advt

ಸ್ಯಾಂಡಲ್ ವುಡ್ ನಟಿ ರಮ್ಯಾ, ಸಾಮಾಜಿಕ ಜಾಲತಾಣಗಳಲ್ಲಿ ಸಂಸದ ತೇಜಸ್ವಿ ಸೂರ್ಯ ಮಸಾಲೆ ದೋಸೆ ತಿಂದು ಪ್ರಮೋಟ್ ಮಾಡುತ್ತಿರುವ ವಿಡಿಯೋ ಶೇರ್ ಮಾಡಿ ಸಂಸದ ಬೇಜವಾಬ್ದಾರಿಗೆ ಕಿಡಿಕಾರಿದ್ದರು.

ಇದರ ಬೆನ್ನಲ್ಲೇ ಇದೀಗ ರಾಜ್ಯ ಕಾಂಗ್ರೆಸ್ ಘಟಕ ಕೂಡ ಸಂಸದರ ವಿರುದ್ಧ ಗುಡುಗಿದ್ದು, ಮತಿ ‘ದೋಷ’ ಇರುವವರನ್ನು ಆಯ್ಕೆ ಮಾಡಿದರೆ, ಜನ ಮುಳುಗುವಾಗ ‘ದೋಸೆ’ ತಿನ್ನಲು ಹೋಗುತ್ತಾರೆ! ಬೆಂಗಳೂರು ಮುಳುಗಿದೆ, ಜನತೆ ಪರದಾಡುತ್ತಿದ್ದಾರೆ, ಆದರೆ ಬೆಂಗಳೂರು ದಕ್ಷಿಣದ ಸಂಸದ ತೇಜಸ್ವಿ ಸೂರ್ಯ ಅವರಿಗೆ ದೋಸೆ ತಿನ್ನುವ ಟೆಂಪ್ಟ್ ಆಗಿದ್ಯಂತೆ!

ಮಕ್ಕಳಾಟ ಆಡಿಕೊಂಡಿದ್ದ ಅಪ್ರಬುದ್ಧರನ್ನು ಸಂಸದರನ್ನಾಗಿಸಿದರೆ ಇನ್ನೇನು ನಿರೀಕ್ಷಿಸಲು ಸಾಧ್ಯ? ಎಂದು ತರಾಟೆಗೆ ತೆಗೆದುಕೊಂಡಿದೆ. ಜನಪ್ರತಿನಿಧಿಗಳ ಬೇಜವಾಬ್ದಾರಿಗೆ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು ಜಲಾವೃತ; ಮುಖ್ಯಮಂತ್ರಿಗಳು ಹೇಳಿದ್ದೇನು?

https://pragati.taskdun.com/politics/heavy-rainbangalorecm-basavaraj-bommai/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button