
ಪ್ರಗತಿವಾಹಿನಿ ಸುದ್ದಿ: ನಮ್ಮ ಮೆಟ್ರೋ ದರ ಏರಿಕೆ ನಿರ್ಧಾರವನ್ನು ಬಿಎಂಆರ್ ಸಿ ಎಲ್ ಕೈಬಿಟ್ಟಿದ್ದರೂ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ರಾಅಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ಮುಂದುವರೆಸಿದ್ದಾರೆ.
ಪದೇ ಪದೇ ಮೆಟ್ರೋ ದರ ಏರಿಕೆ ಮಾಡಿ ಬಳಿಕ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ರಾಜ್ಯದ ಜನರ ದಾರಿ ತಪ್ಪಿಸುತ್ತಿದ್ದಾರೆ. ಮೆಟ್ರೋ ದರ ಏರಿಕೆ ಬಗ್ಗೆ ನಿರ್ಧರಿಸಲು ರಾಜ್ಯ ಸರ್ಕಾರದಲ್ಲಿಯೇ ಸಮಿತಿ ಇದೆ. ಆದರೆ ಕೇಂದ್ರದ ಸಮಿತಿ ಈ ನಿರ್ಧಾರ ಮಾಅಡುವುದು ಎಂದು ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಸಂಸದ ತೇಜಸ್ವಿ ಸೂರ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇಂದು ಸಂಸದ ತೇಜಸ್ವಿ ಸೂರ್ಯ ಹಾಗೂ ಬಿಜೆಪಿ ನಾಯಕರು ಖಾಲಿ ಟ್ರಂಕ್ ಹಿಡಿದು, ಅದಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಫೋಟೋ ಅಂಟಿಸಿಕೊಂಡು ಮೆಟ್ರೋ ಹತ್ತಲೆಂದು ಮೆಟ್ರೋ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಈ ವೇಳೆ ಪೊಲೀಸರು ಸಂಸದರನ್ನು ತಡೆದಿದ್ದಾರೆ.
ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆಗಾಗಿ ಸಂಸದ ತೇಜಸ್ವಿ ಸೂರ್ಯ ಹಾಗೂ ಶಾಸಕ ರಾಮಮೂರ್ತಿ ಹಾಗೂ ಇತರರು ಆರ್.ವಿ ರೋಡ್ ಮೆಟ್ರೋ ನಿಲ್ದಾಣಕ್ಕೆ ಆಗಮಿಸಿ, ಖಾಲಿ ಟ್ರಂಕ್ ಪ್ರದರ್ಶಿಸಿದ್ದಾರೆ. ಬಳಿಕ ಮೆಟ್ರೋ ಹತ್ತಲೆಂದು ಮುನ್ನುಗ್ಗುತ್ತಿದ್ದಂತೆ ಪೊಲೀಸರು ಸಂಸದರನ್ನು ತಡೆದಿದ್ದಾರೆ. ಈ ವೇಳೆ ಪೊಲೀಸರು ಹಾಗೂ ಸಂಸದರ ನಡುವೆ ವಾಗ್ವಾದ ನಡೆದಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರು ಸಂಸದ ತೇಜಸ್ವಿ ಸೂರ್ಯ, ಶಾಸಕ ರಾಮಮೂರ್ತಿಯನ್ನು ವಶಕ್ಕೆ ಪಡೆದಿದ್ದಾರೆ.


