ಪ್ರಗತಿವಾಹಿನಿ ಸುದ್ದಿ: ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನೆ ಅಂಗಳಕ್ಕೆ ಚಿರತೆ ನುಗ್ಗಿದ ಘಟನೆ ನಡೆದಿದೆ.
ನಿನ್ನೆ ರಾತ್ರಿ 11ಗಂಟೆ ಸುಮಾರಿಗೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿಯವರ ನಿವಾಸದ ಅಂಗಳದಲ್ಲಿ ಚಿರತೆ ಒಡಾಡಿರುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಕಾಗೇರಿ ಅವರ ಮನೆಯಲ್ಲಿದ್ದ ಸಾಕು ನಾಯಿಯನ್ನು ಬೇಟೆಯಾಡಲು ಚಿರತೆ ಅಟ್ಟಾಡಿಸಿಕೊಂಡು ಹೋಗಿದೆ. ಚಿರತೆ ದಾಳಿಯಿಂದ ನಾಯಿ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.
ಸ್ವಲ್ಪ ಸಮಯದ ಬಳಿಕ ಏನೂ ಸಿಗದ ಕಾರಣ ಚಿರತೆ ಮತ್ತೆ ಕಡಿನತ್ತ ತೆರಳಿದೆ. ಸಂಸದ ಕಾಗೇರಿಯವರು ಮನೆಯಲ್ಲಿ ಇರುವಾಗಲೇ ಈ ಘಟನೆ ನಡೆದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ