Latest

ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಪ್ರಗತಿವಾಹಿನಿ ಸುದ್ದಿ; ವಿಜಯಪುರ: ಡೆತ್ ನೋಟ್ ಬರೆದಿಟ್ಟು ಶಿಕ್ಷಕರೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯಪುರ ಜಿಲ್ಲೆ ಬಬಲೇಶ್ವರ ತಾಲೂಕಿನಲ್ಲಿ ನಡೆದಿದೆ.

ಶಿಕ್ಷಕ ಬಾಳಪ್ಪ ದಳವಾಯಿ ಕೃಷ್ಣಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಕೊಲ್ಹಾರದ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರಾಗಿದ್ದ ಬಾಳಪ್ಪ ದಳವಾಯಿ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

Home add -Advt

ಬಾಳಪ್ಪ ಬರೆದಿಟ್ಟಿರುವ ಡೆತ್ ನೋಟ್ ಪತ್ತೆಯಾಗಿದ್ದು, ನನ್ನ ಸಾವಿಗೆ ನಾನೇ ಕಾರಣ, ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಬರೆದಿಟ್ಟಿದ್ದಾರೆ.

ಕೆರೆಗೆ ಬಿದ್ದು ಯುವತಿ ಸಾವು

Related Articles

Back to top button