ಪ್ರಗತಿವಾಹಿನಿ ಸುದ್ದಿ: ಶಿರಹಟ್ಟಿ ಭಾವೈಕ್ಯತಾ ಮಹಾಸಂಸ್ಥಾನ ಪೀಠದ ದಿಂಗಾಲೇಶ್ವರ ಸ್ವಾಮೀಜಿ ಧಾರವಾಡ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಗುರುವಾರ ನಾಮಪತ್ರ ಸಲ್ಲಿಸಿದ್ದಾರೆ.
ದಿಂಗಾಲೇಶ್ವರ ಶ್ರೀಗಳು ಮೊದಲು ಮೆರವಣಿಗೆ ಮಾಡದೇ ನೇರವಾಗಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಸಾಂಕೇತಿಕವಾಗಿ ಒಂದು ಸೆಟ್ ನಾಮಪತ್ರವನ್ನು ಸಲ್ಲಿಸಿದ್ದಾರೆ. ಬಳಿಕ ಮೆರವಣಿಗೆ ಮೂಲಕ ಮತ್ತೊಮ್ಮೆ ಚುನಾವಣಾಧಿಕಾರಿಗಳ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದ್ದಾರೆ.
ಧಾರವಾಡ ಬಿಜೆಪಿ ಸಂಸದ ಹಾಗೂ ಕೆಂದ್ರ ಸಚಿವ ಪ್ರಹ್ಲಾದ್ ಜೋಶಿಗೆ ಟಿಕೆಟ್ ನೀಡಬಾರದೆಂದು ಪಟ್ಟು ಹಿಡಿದಿದ್ದ ದಿಂಗಾಲೇಶ್ವರ ಶ್ರೀ ಇದೀಗ ಅವರಿಗೆ ಸೆಡ್ಡು ಹೊಡೆಯಲು ಸ್ವತಃ ತಾವೇ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದಾರೆ.
ಈ ಬಾರಿ ಧಾರವಾಡ ಲೋಕಸಭಾ ಕ್ಷೇತ್ರ ಸಹ ಹೈವೋಲ್ಟೇಜ್ ಕ್ಷೇತ್ರವಾಗಿ ಮಾರ್ಪಡುತ್ತಿದ್ದು, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಬಿಜೆಪಿಯಿಂದ ಸ್ಪರ್ಧೆ ಮಾಡಿದರೆ, ಕಾಂಗ್ರೆಸ್ನಿಂದ ವಿನೋದ ಅಸೂಟಿ ಅಖಾಡಕ್ಕಿಳಿದಿದ್ದಾರೆ. ಇನ್ನು, ತಮಗೆ ಎಲ್ಲಾ ಜಾತಿ, ಧರ್ಮದವರು, ರೈತ ಸಂಘಟನೆಗಳ ಬೆಂಬಲ ಇದೆ ಎನ್ನುತ್ತಿರುವ ದಿಂಗಾಲೇಶ್ವರ ಶ್ರೀ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ