HealthKannada NewsKarnataka NewsNationalPolitics

*ಹೆದ್ದಾರಿಯಲ್ಲಿ ಅಪಘಾತವಾದ್ರೆ ಉಚಿತ ಚಿಕಿತ್ಸೆ: ಆರೋಗ್ಯ ಸಚಿವ ಯು.ಟಿ.ಖಾದರ್*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಹೆದ್ದಾರಿಯಲ್ಲಿ ಅಪರಿಚಿತ ವ್ಯಕ್ತಿಗೆ ಅಪಘಾತವಾದ್ರೆ ಉಚಿತ ಚಿಕಿತ್ಸೆ ನೀಡಲಾಗುತ್ತದೆ ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ಅವರು  ತಿಳಿಸಿದ್ದಾರೆ.

ಕುಮಟಾದಲ್ಲಿ ಮಾತನಾಡಿದ ಅವರು, ಅಪರಿಚಿತ ವ್ಯಕ್ತಿಗೆ ಅಪಘಾತ ಆದಾಗ ಉಚಿತ ಚಿಕಿತ್ಸೆ ನೀಡುವ ಯೋಜನೆ ಜಾರಿಗೊಳಿಸುತ್ತೇವೆ. ಪ್ರಥಮ 7 ದಿನ ಎರಡೂವರೆ ಲಕ್ಷ ತನಕ ಉಚಿತ ಚಿಕಿತ್ಸೆ ನೀಡುವ ಯೋಜನೆ ಇದಾಗಿದೆ. ಈ ಬಗ್ಗೆ ಸಿಎಂ ಜೊತೆ ಚರ್ಚೆ ಮಾಡುತ್ತೇನೆ ಎಂದು ತಿಳಿಸಿದರು.

ಈ ಯೋಜನೆಗೆ ಮುಖ್ಯಮಂತ್ರಿಗಳು ಒಪ್ಪಿಗೆ ಕೊಡುವ ವಿಶ್ವಾಸವಿದೆ. ವಿದೇಶ, ದೇಶ, ರಾಜ್ಯದ ಎಲ್ಲರಿಗೂ ಈ ಯೋಜನೆ ಅನ್ವಯ ಆಗುತ್ತದೆ. ಆ್ಯಕ್ಸಿಡೆಂಡ್ ಇನ್ಷುರೆನ್ಸ್‌ ಸ್ಕೀಂ ಎಂದು ಸಾಂತ್ವನ ಯೋಜನೆ ಜಾರಿಗೊಳಿಸಿದ್ದೆವು. ಆಮೇಲೆ ಕೇಂದ್ರದವರು ಅದನ್ನು ಕಾಪಿ ಮಾಡಿ ಪ್ರಾರಂಭ ಮಾಡಿದ್ರು. ಆದರೆ, ಎರಡೂವರೆ ಲಕ್ಷ ತನಕ ನಾವು ಇದನ್ನು ಜಾಸ್ತಿ ಮಾಡಿ ನೀಡುತ್ತೇವೆ ಎಂದು ಹೇಳಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button