
ಸಂತ್ರಸ್ತರಿಗೆ ಪರಿಹಾರ ವಿತರಿಸಿದ ಶಾಸಕಿ ಹೆಬ್ಬಾಳಕರ್ ಪುತ್ರ ಮೃಣಾಲ್
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ –
ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಸರೀಕಟ್ಟಿ ಗ್ರಾಮದಲ್ಲಿ 1.90 ಕೋಟಿ ರೂ. ವೆಚ್ಚದಲ್ಲಿ ಒಳಾಂಗಣ ರಸ್ತೆ ಕಾಂಕ್ರೀಟ್ ಕಾಮಗಾರಿಗಳು ಪೂರ್ಣಗೊಂಡಿವೆ. ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಪುತ್ರ ಮೃಣಾಲ್ ಹೆಬ್ಬಾಳಕರ್ ಸ್ಥಳೀಯ ಅಧಿಕಾರಿಗಳು ಹಾಗೂ ಮುಖಂಡರ ಜೊತೆ ವೀಕ್ಷಿಸಿದರು.
ಇದಾದ ನಂತರ ಇತ್ತೀಚಿನ ಪ್ರವಾಹದಲ್ಲಿ ಸಂಕಷ್ಟಕ್ಕೀಡಾದವರನ್ನು ಸಂತೈಸಿದ ಮೃಣಾಲ್, ಅವರಿಗೆ ಪರಿಹಾರ ಸಾಮಗ್ರಿಗಳನ್ನು ವಿತರಿಸಿದರು. ಸುಮಾರು 60 ಕುಟುಂಬಗಳಿಗೆ ಲಕ್ಷ್ಮಿ ತಾಯಿ ಫೌಂಡೇಶನ್ ಮತ್ತು ಹರ್ಷ ಶುಗರ್ಸ್ ವತಿಯಿಂದ ಸಂತ್ರಸ್ತರಿಗೆ ನಿತ್ಯ ಬಳಕೆ ವಸ್ತುಗಳನ್ನು, ಆಹಾರ ಧಾನ್ಯಗಳನ್ನು, ಬಟ್ಟೆ, ಹಾಸಿಗೆ, ಹೊದಿಕೆಗಳನ್ನು ವಿತರಿಸಲಾಯಿತು.
ಪಿಡಿಓ, ಗ್ರಾಮ ಪಂಚಾಯತ್ ಸದಸ್ಯರು, ಗ್ರಾಮದ ಹಿರಿಯರು, ಪಕ್ಷದ ಕಾರ್ಯಕರ್ತರು ಈ ವೇಳೆ ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ