Kannada NewsKarnataka NewsLatest

*ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವಕ್ಕೆ ದಿನಾಂಕ ಫಿಕ್ಸ್*

ಪ್ರಗತಿವಾಹಿನಿ ಸುದ್ದಿ: ಐತಿಹಾಸಿಕ ಬೆಂಗಳೂರು ಕರಗ ಶಕ್ತ್ಯೋತ್ಸವಕ್ಕೆ ದಿನಾಂಕ ಫಿಕ್ಸ್​​ ಆಗಿದೆ. ಏಪ್ರಿಲ್ 1ರ ಮಧ್ಯರಾತ್ರಿಯಂದು ಕರಗ ಶಕ್ತ್ಯೋತ್ಸವ ನಡೆಯಲಿದೆ. 16ನೇ ಬಾರಿಗೆ ಅರ್ಚಕರು ಎ.ಜ್ಞಾನೇಂದ್ರಸ್ವಾಮಿ ಬೆಂಗಳೂರು ಕರಗ ಹೊರಲಿದ್ದಾರೆ.

ಧರ್ಮರಾಯ ಸ್ವಾಮಿ ದೇವಾಲಯದ ನೂತನ ವ್ಯವಸ್ಥಾಪನಾ ಸಮಿತಿಯಿಂದ ಬೆಂಗಳೂರು ಕರಗಮಹೋತ್ಸವಕ್ಕೆ ದಿನಾಂಕ ನಿಗದಿಪಡಿಸಲಾಗಿದೆ. ಪ್ರತೀ ವರ್ಷ ಚೈತ್ರ ಮಾಸದ ಪೌರ್ಣಮಿಯ ಸಂದರ್ಭದಲ್ಲಿ ನಡೆಯುವ ಈ ಉತ್ಸವವು ಸಾಮಾನ್ಯವಾಗಿ 9 ರಿಂದ 11 ದಿನಗಳವರೆಗೆ ನಡೆಯುತ್ತದೆ. ಮಾರ್ಚ್ 24ರಂದು ಧ್ವಜಾರೋಹಣದ ಮೂಲಕ ಉತ್ಸವಕ್ಕೆ ಚಾಲನೆ ಸಿಗಲಿದೆ. ಮಾರ್ಚ್ 30ರಂದು ಹಸಿಕರಗ ನಡೆಯಲಿದೆ. ಬಳಿಕ ಏಪ್ರಿಲ್ 1ರ ಮಧ್ಯರಾತ್ರಿ ಬೆಂಗಳೂರು ಕರಗ ಶಕ್ತ್ಯೋತ್ಸವ ನಡೆಯಲಿದೆ.

Home add -Advt

ಒಟ್ಟು 11 ದಿನಗಳ ಕಾಲ ಬೆಂಗಳೂರು ಕರಗ ಶಕ್ತ್ಯೋತ್ಸವ ನಡೆಯಲಿದೆ. ಕಳೆದ ವರ್ಷ ಬೆಂಗಳೂರು ಕರಗ ಹೊತ್ತಿದ್ದ ಅರ್ಚಕರು ಎ.ಜ್ಞಾನೇಂದ್ರ ಸ್ವಾಮಿ ಅವರು 16ನೇ ಬಾರಿಗೆ ಕರಗ ಹೊರಲಿದ್ದಾರೆ.

ತಿಗಳ ಸಮುದಾಯದವರು ಈ ಹಬ್ಬದ ಮುಖ್ಯ ಆಯೋಜಕರಾಗಿದ್ದು, ಶತಮಾನಗಳಿಂದ ಬಂದಿರುವ ಆಚರಣೆಗಳನ್ನು ಶ್ರದ್ಧೆಯಿಂದ ಮುಂದುವರಿಸಿಕೊಂಡು ಬರುತ್ತಿದ್ದಾರೆ. ವಿವಿಧ ಧರ್ಮಗಳ ಜನರು ಭಾಗವಹಿಸುವ ಬೆಂಗಳೂರು ಕರಗ ಉತ್ಸವ ಸಹಭಾಳ್ವೆ ಮತ್ತು ಸೌಹಾರ್ದತೆಯ ಸಂದೇಶವನ್ನು ಸಾರುತ್ತದೆ.


Related Articles

Back to top button