ಭಾನುವಾರ ಬೆಳಗಾವಿಯಲ್ಲಿ ಮೃಣಾಲ ಹೆಬ್ಬಾಳಕರ್ ರ್ಯಾಲಿ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ ಹೆಬ್ಬಾಳಕರ್ ಭಾನುವಾರ ಬೆಳಗಾವಿಯಲ್ಲಿ ರ್ಯಾಲಿ ನಡೆಸಿ, ಮಹಾತ್ಮರ ಪುತ್ಥಳಿಗಳಿಗೆ ಗೌರವ ಮಾಲಾರ್ಪಣೆ ಮಾಡಲಿದ್ದಾರೆ.
ಬೆಳಗ್ಗೆ 8 ಗಂಟೆಗೆ ಹಿಂಡಲಗಾ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ರ್ಯಾಲಿ ಆರಂಭವಾಗಲಿದೆ. ಅಲ್ಲಿಂದ ಅಂಬೇಡ್ಕರ್ ಗಾರ್ಡನ್ ಗೆ ತೆರಳಿ ಡಾ.ಬಾಬಾ ಸಾಹೇಬ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಚನ್ನಮ್ಮ ವೃತ್ತದಲ್ಲಿ ಕಿತ್ತೂರು ರಾಣಿ ಚನ್ನಮ್ಮ ಪುತ್ಥಳಿಗೆ ಮಾಲಾರ್ಪಣೆ ಮಾಡುವರು.
ನಂತರ ಸಂಗೊಳ್ಳಿ ರಾಯಣ್ಣ ಪುತ್ಥಳಿಗೆ, ಬೋಗಾರ್ ವೇಸ್ ಸಂಭಾಜಿ ಮಹಾರಾಜ್ ಪುತ್ಥಳಿಗೆ, ಶಿವಾಜಿ ಗಾರ್ಡನ್ ಛತ್ರಪತಿ ಶಿವಾಜಿ ಮಹಾರಾಜರ ಪುತ್ಥಳಿಗೆ, ಬಸವೇಶ್ವರ ವೃತ್ತದಲ್ಲಿ ಬಸವೇಶ್ವರರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ರಾಜಹಂಸಗಡಕ್ಕೆ ರ್ಯಾಲಿ ತೆರಳಲಿದೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಸೇರಿದಂತೆ ಹಲವಾರು ಮುಖಂಡರು, ಕಾರ್ಯಕರ್ತರು ರ್ಯಾಲಿಯಲ್ಲಿ ಭಾಗವಹಿಸಲಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ