Politics

*ಮೃತ್ಯುಂಜಯ ಶ್ರೀ ರಾಜಕೀಯ ಪುಢಾರಿ ರೀತಿ ವರ್ತಿಸುತ್ತಿದ್ದಾರೆ: ಕೆ.ಎಸ್ ಶಿವರಾಮು*

ಪ್ರಗತಿವಾಹಿನಿ ಸುದ್ದಿ : ರಾಜ್ಯದಲ್ಲಿ ಬೆಳಗಾವಿ ಚಳಿಗಾಲದ ಅಧಿವೇಶನದ ಬೆನ್ನಲ್ಲೇ, ಪಂಚಮಸಾಲಿ 2A ಮೀಸಲಾತಿ ಹೋರಾಟದ ಕಿಚ್ಚು ಹೆಚ್ಚಾಗಿದೆ. ಈ ಹೋರಾಟದ ನೇತೃತ್ವ ವಹಿಸಿರುವ ಸಮುದಾಯದ ಬಸವ ಜಯಮೃತ್ಯುಂಜಯ ಸ್ವಾಮೀಜಿಯವರ ಬಗ್ಗೆ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಅಧ್ಯಕ್ಷ ಕೆ.ಎಸ್ ಶಿವರಾಮು ನಾಲಗೆ ಹರಿಬಿಟ್ಟಿದ್ದಾರೆ.

ಈ ಬಗ್ಗೆ ಮಾತನಾಡಿದ ಕೆ.ಎಸ್ ಶಿವರಾಮು ಆಕ್ರೋಶ ವ್ಯಕ್ತಪಡಿಸುವ ಭರದಲ್ಲಿ ಆಕ್ಷೇಪಾರ್ಹ ಹೇಳಿಕೆಯನ್ನ ನೀಡಿದ್ದಾರೆ. ಮೀಸಲಾತಿ ವಿಚಾರದಲ್ಲಿ ಒಂದು ವೇಳೆ ನಮ್ಮ ಅನ್ನದ ತಟ್ಟೆಗೆ ಯಾರಾದ್ರು ಕೈ ಹಾಕಿದರೆ ಕೈ ಕತ್ತರಿಸುತ್ತೇವೆ ಎಂಬ ಹುಂಬತನದ ಹೇಳಿಕೆ ನೀಡಿದ್ದಾರೆ.

ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಕೆ.ಎಸ್‌ ಶಿವರಾಮು, ನಾವು ಜಯಮೃತ್ಯುಂಜಯ ಸ್ವಾಮೀಜಿ ಮೀಸಲಾತಿ ಹೋರಾಟವನ್ನು ಖಂಡಿಸುತ್ತೇವೆ. ಬಸವ ಜಯಮೃತ್ಯುಂಜಯ ಸ್ವಾಮೀಜಿಗಳು ರಾಜಕೀಯ ಪುಢಾರಿ ರೀತಿ ವರ್ತಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಮೀಸಲಾತಿ ವಿಚಾರ ಕೋರ್ಟ್ ನಲ್ಲಿರುವಾಗ ಈ ರೀತಿ ಜನರನ್ನು ಎತ್ತಿಕಟ್ಟಿ ಗಲಾಟೆ ಎಬ್ಬಿಸುವುದು ಸ್ವಾಮೀಜಿಗೆ ಶೋಭೆ ತರುವುದಿಲ್ಲ ಎಂದಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button