Belagavi NewsBelgaum NewsKannada NewsKarnataka NewsLatestPolitics
*ಒಂದು ಕೋಟಿ ರೂ. ವೆಚ್ಚದಲ್ಲಿ ರಸ್ತೆಗಳ ಅಭಿವೃದ್ಧಿ : ಪೂಜೆ ಸಲ್ಲಿಸಿದ ಮೃಣಾಲ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರ ವ್ಯಾಪ್ತಿಯ ಸರಸ್ವತಿ ನಗರ, ಲಕ್ಷ್ಮೀ ಟೆಕಡಿ, ಫ್ರೀಡಂ ಫೈಟರ್ಸ್ ಕಾಲೋನಿ ಹಾಗೂ ಶಿವನೇರಿ ಕಾಲೋನಿಯ ರಸ್ತೆಗಳ ನಿರ್ಮಾಣದ ಕಾಮಗಾರಿಗೆ ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್, ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ಸೇರಿ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ವಿಶೇಷ ಆಸಕ್ತಿಯಿಂದ ಮಂಜೂರಾಗಿರುವ ಸುಮಾರು 1 ಕೋಟಿ ರೂ.ಗಳ ವೆಚ್ಚದಲ್ಲಿ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗುವುದು. ನಿಗದಿತ ಸಮಯದಲ್ಲಿ ಕಾಮಗಾರಿ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಲಾಯಿತು.
ಈ ವೇಳೆ ಮೋಹನ್ ಸಾಂಬ್ರೇಕರ್, ಅನಿಲ್ ಲೋಬೊ ಫ್ರಾನ್ಸಿಸ್, ಸಹರಾ ಬಾನು, ಕಾಶೀನಾಥ್ ಸಾಂಬ್ರೇಕರ್ ಮುಂತಾದವರು ಉಪಸ್ಥಿತರಿದ್ದರು.


