Belagavi NewsBelgaum NewsKannada NewsKarnataka NewsLatest

*ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೊಕಮೂರ್ ಗ್ರಾಮದಲ್ಲಿ ಸುಮಾರು 25 ಲಕ್ಷ ರೂ.ಗಳ ವೆಚ್ಚದಲ್ಲಿ ರಸ್ತೆ ನಿರ್ಮಾಣದ ಕಾಮಗಾರಿಗೆ ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು.


ಗ್ರಾಮೀಣ ಕ್ಷೇತ್ರದಲ್ಲಿ ಕಳೆದ 7 ವರ್ಷದಿಂದ ಕ್ರಾಂತಿಕಾರಕವಾಗಿ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ. ಕ್ಷೇತ್ರದ ಚಿತ್ರಣವೇ ಬದಲಾಗಿದೆ. ಕ್ಷೇತ್ರದ ಶಾಸಕರಾಗಿರುವ, ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಸಾಕಷ್ಟು ಯೋಜನೆಗಳನ್ನು ತರುತ್ತಿದ್ದಾರೆ. ಕ್ಷೇತ್ರದ ಜನರು ಅವರ ಬೆನ್ನಿಗೆ ನಿಲ್ಲಬೇಕು ಎಂದು ಮೃಣಾಲ ಹೆಬ್ಬಾಳಕರ್ ವಿನಂತಿಸಿದರು.

ಈ ವೇಳೆ ಕಾಡಾ ಅಧ್ಯಕ್ಷ ಯುವರಾಜ ಕದಂ, ಸ್ಥಳೀಯ ಜನ ಪ್ರತಿನಿಧಿಗಳು, ಗ್ರಾಮದ ಮುಖಂಡರು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Home add -Advt

Related Articles

Back to top button