Election NewsPolitics

*ಗೋಕಾಕ ತಾಲೂಕಿನಾದ್ಯಂತ ಮೃಣಾಲ ಹೆಬ್ಬಾಳಕರ್ ಗೆ ಭಾರೀ ಬೆಂಬಲ*

ಪ್ರಗತಿವಾಹಿನಿ ಸುದ್ದಿ: ಗೋಕಾಕ ತಾಲೂಕಿನ ವಿವಿಧೆಡೆ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ ಹೆಬ್ಬಾಳಕರ್ ಪ್ರಚಾರ ನಡೆಸಿ, ಮೇ 7ರಂದು ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ತಮ್ಮ ಗುರುತಾದ ಹಸ್ತಕ್ಕೆ ಮತ ನೀಡುವಂತೆ ಮನವಿ ಮಾಡಿದರು.


ಕಾಂಗ್ರೆಸ್ ಸರಕಾರ ನುಡಿದಂತೆ ನಡೆಯುತ್ತಿದೆ. ಗ್ಯಾರಂಟಿ ಯೋಜನೆಗಳ ಮೂಲಕ ನಿಮ್ಮ ನೆರವಿಗೆ ಬಂದಿದೆ. ಮುಂದಿನ ದಿನಗಳಲ್ಲಿ ಕೇಂದ್ರ ಸರಕಾರದ ಯೋಜನೆಗಳನ್ನು ತರುವ ಮೂಲಕ ಕ್ಷೇತ್ರವನ್ನು ಸಮಗ್ರವಾಗಿ ಅಭಿವೃದ್ದಿಪಡಿಸಲಾಗುವುದು. ಕೇವಲ ಚುನಾವಣೆ ಸಂದರ್ಭದಲ್ಲಿ ಬಂದಿರುವ ಬಿಜೆಪಿ ಅಭ್ಯರ್ಥಿಯ ಮಾತಿಗೆ ಮರುಳಾಗಬೇಡಿ. ಚುನಾವಣೆಯ ನಂತರ ಅವರು ಯಾರ ಕೈಗೂ ಸಿಗುವುದಿಲ್ಲ. ಸ್ಥಳೀಯನಾಗಿರುವ ನನ್ನನ್ನು ಬೆಂಬಲಿಸಿ ಎಂದು ಮನವಿ ಮಾಡಿದರು.


ಗೋಕಾಕ ವಿಧಾ‌ನಸಭಾ ಕ್ಷೇತ್ರದ ಮಕ್ಕಳಗೇರಿ, ಮಾಲದಿನ್ನಿ, ಉಪ್ಪಾರಟ್ಟಿ, ಮರಡಿ ಶಿವಾಪುರ ಹಾಗೂ ಮಮದಾಪುರ ಗ್ರಾಮಗಳಲ್ಲಿ ಪ್ರಚಾರ ಕೈಗೊಂಡು ಮತ ಯಾಚಿಸಿದರು.

Home add -Advt


ಹೋದಲ್ಲೆಲ್ಲ ಭಾರೀ ಬೆಂಬಲ ವ್ಯಕ್ತವಾಯಿತು. ಯಾವುದೇ ಕಾರಣದಿಂದ ಈ ಬಾರಿ ಬೆಳಗಾವಿಗೆ ಅನ್ಯಾಯ ಮಾಡಿರುವ ಹೊರಗಿನ ಅಭ್ಯರ್ಥಿಗೆ ಮತ ನೀಡುವುದಿಲ್ಲ. ಪಕ್ಷಾತೀತವಾಗಿ ಎಲ್ಲರೂ ಕಾಂಗ್ರೆಸ್ ಬೆಂಬಲಿಸುತ್ತೇವೆ ಎಂದು ಜನರು ಅಭಯ ನೀಡಿದರು.

ಈ ಸಮಯದಲ್ಲಿ‌ ಕಾಂಗ್ರೆಸ್ ವಕ್ತಾರೆ ತೇಜಸ್ವಿನಿ ಗೌಡ, ಕಾಂಗ್ರೆಸ್ ಮುಖಂಡರಾದ ಡಾ.ಮಹಾಂತೇಶ್ ಕಡಾಡಿ, ಸ್ಥಳೀಯ ಮುಖಂಡರು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button