Belagavi NewsBelgaum NewsPolitics

*ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್ ನಾಮಪತ್ರ ಸಲ್ಲಿಕೆ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ ಮಾಡಿದರು.

ನಾಮಪತ್ರ ಸಲ್ಲಿಕೆಗೂ ಮುನ್ನ ಕುವೆಂಪು ನಗರದ ನಿವಾಸದಲ್ಲಿ ಗೋಪೂಜೆ ನೆರವೇರಿಸಿದರು. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ, ಮೃಣಾಲ್‌ ಹೆಬ್ಬಾಳ್ಕರ್ ಅವರ ಪತ್ನಿ ಹಿತಾ ಹೆಬ್ಬಾಳ್ಕರ್ ಗೋಪೂಜೆಯಲ್ಲಿ ಭಾಗವಹಿಸಿದರು.

ಮನೆಗೆ ವಿವಿಧ ಮಠಾಧೀಶರು ಭೇಟಿ
ಗೋಪೂಜೆ ಬಳಿಕ ವಿವಿಧ ಮಠಾಧೀಶರು ಸಚಿವರ ನಿವಾಸಕ್ಕೆ ಆಗಮಿಸಿ ಆಶೀರ್ವದಿಸಿದರು. ಕೂಡಲ ಸಂಗಮದ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ, ಹುಕ್ಕೇರಿ ಹೀರೆಮಠದ ಚಂದ್ರಶೇಖರ್ ಶಿವಾಚಾರ್ಯ ಸ್ವಾಮೀಜಿ, ಕಾರಂಜಿ ಮಠದ ಗುರುಸಿದ್ದ ಸ್ವಾಮೀಜಿ ಸೇರಿದಂತೆ 20ಕ್ಕೂ ಹೆಚ್ಚು ಮಠಾಧೀಶರು ಆಶೀರ್ವದಿಸಿದರು.

Home add -Advt

2 ಲಕ್ಷ ಮತಗಳ ಅಂತರದಿಂದ ಗೆಲುವು
ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳ್ಕರ್ ಎರಡು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾನೆ ಎಂದು ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ವಿಶ್ವಾಸ ವ್ಯಕ್ತಪಡಿಸಿದರು. ಹಟ್ಟಿಹೊಳಿಯಲ್ಲಿ ವೀರಭದ್ರೇಶ್ವರ ಹಾಗೂ ಸುಳೇಭಾವಿಯಲ್ಲಿ ಲಕ್ಷ್ಮೀ ಪೂಜೆ ಮಾಡಿದ್ದೇವೆ. ಗುರುಗಳನ್ನು ಮನೆಗೆ ಕರೆದು ಪಾದ ಪೂಜೆ ಮಾಡಿದ್ದು, ವಿಜಯಯಾತ್ರೆಯ ಸಂಕಲ್ಪ ಇಟ್ಟುಕೊಂಡು ಪೂಜೆ ಮಾಡಿದ್ದೇವೆ ಎಂದು ಹೇಳಿದರು.

ಮೃಣಾಳ್ ಹೆಬ್ಬಾಳ್ಕರ್ ನಾಮಪತ್ರ ಸಲ್ಲಿಸುವ ವೇಳೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ, ಶಾಸಕರಾದ ಲಕ್ಷ್ಮಣ್ ಸವದಿ, ಪ್ರಕಾಶ್ ಹುಕ್ಕೇರಿ‌,‌ ಮಹಾಂತೇಶ್ ಕೌಜಲಗಿ, ವಿಶ್ವಾಸ್ ವೈದ್ಯ, ಅಶೋಕ್ ಪಟ್ಟಣ್, ರಾಜು ಸೇಠ್, ಗಣೇಶ್ ಹುಕ್ಕೇರಿ, ಬಾಬಾ ಸಾಹೇಬ್ ಪಾಟೀಲ್, ರಾಜು ಕಾಗೆ ಸೇರಿದಂತೆ ಜಿಲ್ಲೆಯ ಎಲ್ಲಾ ಶಾಸಕರು, ಮುಖಂಡರು, ಅಪಾರ ಸಂಖ್ಯೆಯಲ್ಲಿ ಕಾರ್ಯಕರ್ತರರು ಹಾಜರಿದ್ದರು.

Related Articles

Back to top button