
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಹಾಗೂ ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ಸಂಪೂರ್ಣ ಅಭಿವೃದ್ಧಿಯಾಗಬೇಕು. ದಲಿತರಿಗೆ ನ್ಯಾಯ ಸಿಗುವ ಉದ್ದೇಶದಿಂದ ಈ ಸಲ ಕಾಂಗ್ರೆಸ್ ಅಭ್ಯರ್ಥಿಗಳಾದ ಮೃಣಾಲ್ ಹೆಬ್ಬಾಳ್ಕರ್ ಹಾಗೂ ಪ್ರಿಯಾಂಕಾ ಜಾರಕಿಹೊಳಿಗೆ ದಲಿತ ಸಂಘರ್ಷ ಸಮಿತಿ ಬೆಂಬಲ ನೀಡಲಿದೆ ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಘಟನಾ ಸಂಚಾಲಕ ಬಸವರಾಜ ತಳವಾರ ಹೇಳಿದರು.
ಶುಕ್ರವಾರ ಕನ್ನಡ ಸಾಹಿತ್ಯ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರದಲ್ಲಿ ಕಳೆದ 10 ವರ್ಷಗಳಿಂದ ಯಾವುದೇ ಅಭಿವೃದ್ಧಿ ಕೆಲಸ ಮಾಡದೆ ಸಂವಿಧಾನ ಬದಲಾವಣೆಗಾಗಿ ಬಿಜೆಪಿ ಅಧಿಕಾರಕ್ಕೆ ಬಂದಿದೆ ಎನ್ನುತ್ತ ದಲಿತರ ಕೆಂಗಣ್ಣಿಗೆ ಗುರಿಯಾಗಿರುವ ಕೇಂದ್ರ ಬಿಜೆಪಿ ಸರಕಾರದಿಂದ ದಲಿತರ ಉದ್ಧಾರಬೇಕಿಲ್ಲ. ಬಿಜೆಪಿ ಒಕ್ಕೂಟದ ಸರಕಾರವು ಸಂವಿಧಾನದ ಆಶಯಗಳನ್ನು ಗಾಳಿಗೆ ತೂರಿ ಪ್ರಜಾಪ್ರಭುತ್ವವನ್ನು ನಾಶ ಮಾಡಲು ಹೊರಟಿದೆ. ಇವರಿಗೆ ತಕ್ಕ ಪಾಠ ಕಲಿಸಲು ದಲಿತ ಸಂಘರ್ಷ ಸಮಿತಿ ಬೆಳಗಾವಿ ಲೋಕಸಭಾ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್ ಹಾಗೂ ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿಗೆ ಬೆಂಬಲ ಸೂಚಿಸಲು ತೀರ್ಮಾನಿಸಲಾಗಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಸಂಚಾಲಕ ದುರ್ಗಪ್ಪ ಮೇಲಿನಮನಿ, ಪ್ರಕಾಶ್ ಮರಡಿ, ಲಕ್ಷ್ಮಣ್ ಗುಂಡಪ್ಪನವರ, ಶಿವರಾಮ ತಳವಾರ್, ದುರ್ಗಾ ರಾಮ್ ಕಾಂಬಳೆ, ಬಾಬು ತಳವಾರ್, ವಿಜಯ ದೇಮಟ್ಟಿ, ಮಲ್ಲೇಶ ಕಾಂಬಳೆ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ