Belagavi NewsBelgaum NewsKarnataka News

*ಸಮುದಾಯ ಭವನದ ಮೇಲ್ಚಾವಣಿ ಕಾಮಗಾರಿಗೆ ಚಾಲನೆ*

ಪ್ರಗತಿವಾಹಿನಿ ಸುದ್ದಿ: ಸಾಂಬ್ರಾ ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿರುವ ಶ್ರೀ ಬಸವೇಶ್ವರ ಸಮುದಾಯ ಭವನ ಕಟ್ಟಡದ ಮೇಲ್ಚಾವಣಿಗೆ ಕಾಂಕ್ರೀಟ್ ಹಾಕುವ ಕಾಮಗಾರಿಗೆ ಸ್ಥಳೀಯ ಜನ ಪ್ರತಿನಿಧಿಗಳು, ಮುಖಂಡರು ಹಾಗೂ ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ಸೇರಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು.

Home add -Advt


ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ವಿಶೇಷ ಪ್ರಯತ್ನದಿಂದ ಮಂಜೂರು ಮಾಡಿಸಿರುವ ಸುಮಾರು 25 ಲಕ್ಷ ರೂ.ಗಳ ವೆಚ್ಚದಲ್ಲಿ ಸಮುದಾಯ ಭವನ ನಿರ್ಮಾಣಗೊಳ್ಳಲಿದೆ.

ಈ ಸಂದರ್ಭದಲ್ಲಿ ನಾಗೇಶ ದೇಸಾಯಿ, ಸದು ಪಾಟೀಲ, ಪ್ರವೀಣ ಮಾನೆ, ಸಂಜು ದೇಸಾಯಿ, ಚಕ್ರು ಪಾಟೀಲ, ಉಮೇಶ ಮಾಸ್ತಮರಡಿ, ಲಕ್ಷ್ಮಣ ಸುಳೇಭಾವಿ, ಭುಜಂಗ ಗಿರಮಲ್ಲ, ಗಜಾನನ ಕಮ್ಮಾರ, ರಾಜು ಪಾಟೀಲ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Related Articles

Back to top button