
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಖನಗಾಂವ್ ಬಿ.ಕೆ ಗ್ರಾಮದಲ್ಲಿ ನೂತನ ಪ್ರೌಢಶಾಲೆಯ ಸುಮಾರು 10 ಕೊಠಡಿಗಳ ನಿರ್ಮಾಣದ ಕಾಮಗಾರಿಗೆ ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್ ಹಾಗೂ ಸ್ಥಳೀಯ ಮುಖಂಡರು ಸೇರಿ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು.
ಸುಮಾರು 1.22 ಕೋಟಿ ರೂ,ಗಳ ವೆಚ್ಚದಲ್ಲಿ ಕೊಠಡಿಗಳು ನಿರ್ಮಾಣಗೊಳ್ಳಲಿವೆ. ಇದೇ ಸಮಯದಲ್ಲಿ ಗುಣಮಟ್ಟದ ಕೊಠಡಿಗಳನ್ನು ನಿರ್ಮಾಣ ಮಾಡಲು ಗುತ್ತಿಗೆದಾರರಿಗೆ ಸೂಚಿಸಲಾಗಿದೆ.
ಮುಖಂಡರು, ಗ್ರಾಮಸ್ಥರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ