Belagavi NewsBelgaum NewsKarnataka NewsLatestPolitics

*2.50 ಕೋಟಿ ರೂ.ವೆಚ್ಚದಲ್ಲಿ ರಸ್ತೆ ನಿರ್ಮಾಣ: ಕಾಮಗಾರಿಗೆ ಚಾಲನೆ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ತುರಮುರಿ ಹಾಗೂ ಕೋನೆವಾಡಿ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ನಿರ್ಮಾಣದ ಕಾಮಗಾರಿಗೆ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ಸೇರಿ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು‌.


ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ವಿಶೇಷ ಪ್ರಯತ್ನದಿಂದ ಅನುದಾನ ಮಂಜೂರಾಗಿದ್ದು, ಸುಮಾರು 2.50 ಕೋಟಿ ರೂ.ಗಳ ವೆಚ್ಚದಲ್ಲಿ 2.7 ಕಿ.ಮೀ ರಸ್ತೆ ನಿರ್ಮಾಣವಾಗಲಿದೆ. ರಸ್ತೆಯ ಗುಣಮಟ್ಟ ಕಾಯ್ದುಕೊಳ್ಳುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಿದರು.

ಈ ವೇಳೆ ಆಯಾ ಗ್ರಾಮಗಳ ಹಿರಿಯರು, ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related Articles

Back to top button