ಕೆಪಿಸಿಸಿ ಮನೆಯೊಂದು ಮೂರು ಬಾಗಿಲು ಎಂದ ಎಂಟಿಬಿ

ಪ್ರಗತಿವಾಹಿನಿ ಸುದ್ದಿ; ಕೋಲಾರ: ಕಾಂಗ್ರೆಸ್ ನಲ್ಲಿ ಮೂರು ಗುಂಪುಗಳಿದ್ದು, ಈ ಗುಂಪುಗಾರಿಕೆಯೇ ಕೆಪಿಸಿಸಿಗೆ ಈವರೆಗೆ ಅಧ್ಯಕ್ಷರನ್ನು ಆಯ್ಕೆ ಮಾಡಲಾಗದ ಸ್ಥಿತಿಗೆ ತಲುಪಲು ಕಾರಣ ಎಂದು ಮಾಜಿ ಸಚಿವ ಎಂಟಿಬಿ ನಾಗರಾಜ್ ವಗ್ದಾಳಿ ನಡೆಸಿದ್ದಾರೆ.

ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್​ ಹೈಕಮಾಂಡ್​ ಇದೀಗ ಶಕ್ತಿ ಕಳೆದುಕೊಂಡು ಲೋ ಕಮಾಂಡ್ ಆಗಿದೆ. ರಾಜ್ಯ ಕಾಂಗ್ರೆಸ್​ ನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ ಹಾಗೂ ಡಿ.ಕೆ. ಶಿವಕುಮಾರ್ ಎಂಬ ಮೂರು ಗುಂಪುಗಳಿದ್ದು, ಅಕ್ಷರಶಃ ಮನೆಯೊಂದು ಮೂರು ಬಾಗಿಲಿನಂತಾಗಿದೆ ಎಂದರು.

ಇದೇ ವೇಳೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ಮಾತನಾಡಿದ ಎಂಟಿಬಿ, ಸಂಪುಟ ವಿಸ್ತರಣೆ ಶೀಘ್ರದಲ್ಲೇ ಆಗಲಿದೆ. ಸಿಎಂ ನಿರ್ಧಾರಕ್ಕೆ ನಾನು ಬದ್ಧನಾಗಿದ್ದೇನೆ. ಪಕ್ಷದಲ್ಲಿ ನನ್ನನ್ನು ಗೌರವಯುತವಾಗಿ ನಡೆಸಿಕೊಳ್ಳುತ್ತಿದ್ದಾರೆ. ಅಲ್ಲದೆ, ಸಂಸದ ಬಚ್ಚೇಗೌಡ ವಿರುದ್ಧ ಕ್ರಮ ವಹಿಸುವ ವಿಶ್ವಾಸ ಇದೆ ಎಂದು ತಿಳಿಸಿದ್ದಾರೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button