ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: 17 ಶಾಸಕರ ರಾಜೀನಾಮೆಯಿಂದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದೆ. ರಾಜೀನಾಮೆಗೂ ಮೊದಲು ಯಡಿಯೂರಪ್ಪ ಜೊತೆ ಹಲವು ಬಾರಿ ಚರ್ಚೆ ನಡೆದಿದೆ. ಅಲ್ಲಿ ಅವರು ಕೊಟ್ಟ ಮಾತು ಅವರಿಗೂ ಸೇರಿ ಎಲ್ಲರಿಗೂ ತಿಳಿದಿದೆ. ಇಲ್ಲಿ ಸೋಲು-ಗೆಲುವಿನ ಪ್ರೆಶ್ನೆ ಬರಲ್ಲ ಕೊಟ್ಟಮಾತು ಉಳಿಸಿಕೊಳ್ಳಬೇಕು ಎಂದು ಮಾಜಿ ಶಾಸಕ ಎಂಟಿಬಿ ನಾಗರಾಜ್ ಹೇಳಿದ್ದಾರೆ.
ಸಂಪುಟ ವಿಸ್ತರಣೆ ಕಂಗ್ಗಂಟಾಗಿರುವ ಹಿನ್ನಲ್ಲೆಯಲ್ಲಿ ಪ್ರತಿಕ್ರಿಯಿಸಿದ ಎಂಟಿಬಿ, ಸಚಿವ ಸಂಪುಟಕ್ಕೆ ಯಾರನ್ನು ಸೇರಿಸಿಕೊಳ್ಳಬೇಕು ಬಿಡಬೇಕು ಎಂಬುದು ಯಡಿಯೂರಪ್ಪನವರಿಗೆ ಚೆನ್ನಾಗಿ ತಿಳಿದಿದೆ. ಯಡಿಯೂರಪ್ಪನವರು ನಮ್ಮ ನಾಯಕರು. ಅವರನ್ನು ನಂಬಿ ನಾವು ರಾಜೀನಾಮೆ ನೀಡಿ ಬಂದಿದ್ದೇವೆ. ಸಂಪುಟ ವಿಸ್ತರಣೆ ಚರ್ಚೆಗೆಂದೇ ಅವರು ದೆಹಲಿಗೆ ಹೋಗಿದ್ದಾರೆ. ಅಲ್ಲಿ ಏನು ನಿರ್ಧಾರ ಕೈಗೊಳ್ಳುತ್ತಾರೆ ನೋಡೋಣ ಎಂದರು.
ಸಿಎಂ ಕೊಟ್ಟ ಮಾತು ತಪ್ಪುವುದಿಲ್ಲ. ಇಲ್ಲಿಯವರೆಗೆ ಕೊಟ್ಟ ಮಾತಿನಂತೆ ತಾಲ್ಲೂಕಿನ ಅಭಿವೃದ್ಧಿ ಕೆಲಸಗಳು, ಅಧಿಕಾರಿಗಳ ವರ್ಗಾವಣೆ ಸೇರಿದಂತೆ ಎಲ್ಲಾ ವಿಚಾರಗಳಲ್ಲೂ ಸ್ಪಂದಿಸಿದ್ದಾರೆ. ನಾವು ಹೇಳಿದ ಕೆಲಸಗಳನ್ನೆಲ್ಲಾ ಮಾಡಿದ್ದಾರೆ. ಹಾಗಾಗಿ ಕೊಟ್ಟ ಮಾತಿನಂತೆ ಮಂತ್ರಿಗಿರಿಯನ್ನೂ ನೀಡುವ ವಿಶ್ವಾಸವಿದೆ. 17 ಮಂದಿಗೂ ಪ್ರಾಮುಖ್ಯತೆ ಕೊಡಬೇಕು ಎಂದು ಹೇಳಿದರು.
ರಾಜೀನಾಮೆ ವೇಳೆ ಕೊಟ್ಟ ಮಾತು ಅವರಿಗೂ ಗೊತ್ತಿದೆ. ಅವರ ಮನಸ್ಸಿನಲ್ಲಿ ನಾವಿದ್ದೇವೆ ಎಂದು ಭಾವಿಸಿದ್ದೇವೆ. ಗೆದ್ದ 11 ಶಾಸಕರು, ಸೋತವರು, ಮೂಲ ಬಿಜೆಪಿಗರು ಹೀಗೆ ಎಲ್ಲರಿಗೂ ಸಚಿವ ಸ್ಥಾನ ನೀಡುವ ಬಗ್ಗೆ ಗೊಂದಲವಿದೆ. ಎಲ್ಲಾ ಗೊಂದಲವನ್ನು ಸರಿಪಡಿಸಿ, ಎಲ್ಲರನ್ನೂ ಸಮಾಧಾನಪಡಿಸಿ ಸಂಪುಟ ವಿಸ್ತರಣೆ ಮಾಡಬೇಕು. ಗೊಂದಲ ಸರಿಯಾಗದಿದ್ದರೆ ಸಂಪುಟ ವಿಸ್ತರಣೆಯಾಗಲ್ಲ. ಯಡಿಯೂರಪ್ಪನವರಿಗೆ ಯಾರಿಗೆ ಸ್ಥಾನ ನೀಡಬೆಂಕೆಂದು ಗೊತ್ತಿದೆ ಅವರೇ ತೀರ್ಮಾನ ಕೈಗೊಳ್ಳುತ್ತಾರೆ ಎಂದು ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ