Latest

ಸಿಎಂ ವಿರುದ್ಧ ಸಚಿವ ಎಂಟಿಬಿ ಅಸಮಾಧಾನ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಸಚಿವ ಎಂಟಿಬಿ ನಾಗರಾಜ್ ಮತ್ತೆ ಅಸಮಾಧಾನ ಹೊರಹಾಕಿದ್ದಾರೆ. ಜಿಲ್ಲಾ ಉಸ್ತುವಾರಿ ಹೊಣೆಗಾರಿಕೆ ನೀಡದಿರುವುದಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಂಟಿಬಿ, ರಾಜ್ಯದಲ್ಲಿ ಜೂನ್ 7ರ ಬಳಿಕ ಲಾಕ್ ಡೌನ್ ವಿಸ್ತರಣೆ ಅಗತ್ಯವಿಲ್ಲ. ಸೋಂಕಿತರ ಸಂಖ್ಯೆ ಇಳಿಮುಖವಾಗಿತ್ತಿದೆ. ಅಲ್ಲದೇ ಇನ್ನಷ್ಟು ದಿನಗಳ ಕಾಲ ಲಾಕ್ ಡೌನ್ ಮಾಡುವುದರಿಂದ ಬಡವರು, ಕೂಲಿ ಕಾರ್ಮಿಕರು ಸಂಕಷ್ಟಕ್ಕೀಡಾಗುತ್ತಾರೆ ಎಂದರು.

ಇದೇ ವೇಳೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಬಗ್ಗೆ ನನಗೆ ಮಾಹಿತಿ ಇದೆ. ನನಗೆ ಜಿಲ್ಲೆ ಉಸ್ತುವಾರಿ ನೀಡಿದರೆ ಪಕ್ಷ ಸಂಘಟನೆ ಮಾಡುತ್ತಿದ್ದೆ. ಆದರೆ ನನಗೆ ಅವಕಾಶವನ್ನೇ ಕೊಟ್ಟಿಲ್ಲ. ಕೆಲಸ ಮಾಡುವವರ ಕೈಗಳಿಗೆ ಜವಾಬ್ದಾರಿ ಕೊಡಬೇಕು. ಆದರೆ ಸಿಎಂ ಯಡಿಯೂರಪ್ಪ ಮನಸ್ಸಿನಲ್ಲಿ ಏನಿದೆ ಎಂಬುದೇ ಅರ್ಥವಾಗುತ್ತಿಲ್ಲ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಮಕ್ಕಳಲ್ಲು ಪತ್ತೆಯಾಯ್ತು ಬ್ಲ್ಯಾಕ್ ಫಂಗಸ್…1

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button