Latest

ಸತ್ಯಹರಿಶ್ಚಂದ್ರ, ಧರ್ಮರಾಯ ಮತ್ತು ನಳ ಮಹಾರಾಜ ಯಾರೂ ನನ್ನ ಕಣ್ಣಿಗೆ ಬಿದ್ದಿಲ್ಲ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೊವಿಡ್ ಸಲಕರಣೆಗಳ ಖರೀದಿ ವಿಚಾರದಲ್ಲಿ ವಿಪಕ್ಷ ನಾಯಕರು ಮಾಡಿರುವ ಆರೋಪಕ್ಕೆ ತಿರುಗೇಟು ನೀಡಿರುವ ವಿಧಾನ ಪರಿಷತ್ ಸದಸ್ಯ ಎಂಟಿಬಿ ನಾಗರಾಜ್, ನಲವತ್ತು ವರ್ಷಗಳ ರಾಜಕೀಯದಲ್ಲಿ ಎಲ್ಲರನ್ನು ನೋಡಿದ್ದೇನೆ. ಆದರೆ ಸತ್ಯಹರಿಶ್ಚಂದ್ರ, ಧರ್ಮರಾಯ ಮತ್ತು ನಳ ಮಹಾರಾಜ ಯಾರೂ ನನ್ನ ಕಣ್ಣಿಗೆ ಬಿದ್ದಿಲ್ಲ ಎಂದು ಗುಡುಗಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿರೋಧ ಪಕ್ಷದವರು ಆರೋಪಗಳು, ಪ್ರತ್ಯಾರೋಪಗಳನ್ನು ಮೀಡಿಯಾದಲ್ಲಿ ಮಾಡಿದ್ದಾರೆ. ಯಾವ ಯಾವ ಕಾಲದಲ್ಲಿ ಯಾರ‍್ಯಾರು ಮುಖ್ಯಮಂತ್ರಿಗಳಾಗಿದ್ದರು. ಯಾವ ಮುಖ್ಯಮಂತ್ರಿ ಕಾಲದಲ್ಲಿ ಎಷ್ಟೆಷ್ಟು ಹಗರಣ ಆಗಿವೆ ಎಂಬುದು ಎಲ್ಲರಿಗೂ ಗೊತ್ತಿದೆ. ಈಗ ರಾಜಕೀಯದಲ್ಲಿ ಯಾರೂ ಸತ್ಯಹರಿಶ್ಚಂದ್ರ, ಧರ್ಮರಾಯ ಮತ್ತು ನಳ ಮಹಾರಾಜರು ಇಲ್ಲ ಎಂದು ಹೇಳಿದರು.

ಇಂದು ನಾವು ಸಾವು-ಬದುಕಿನ ಮಧ್ಯೆ ಹೋರಾಟ ಮಾಡುತ್ತಿದ್ದೇವೆ. ರಾಜಕೀಯ ಮಾಡಿ, ಆದರೆ ಈ ಸಮಯದಲ್ಲಿ ಬೇಡ. ಶಾಸಕರು, ಸಚಿವರು, ಜನಪ್ರತಿನಿಧಿಗಳು ಆಸ್ಪತ್ರೆಗೆ ಹೋಗಬೇಕು. ಅಲ್ಲಿ ಉಸ್ತುವಾರಿ ವಹಿಸಿಕೊಂಡು ಕೊರೊನಾ ನಿಯಂತ್ರಿಸಲು ಕೆಲಸ ಮಾಡಬೇಕು ಎಂದು ತಿಳಿಸಿದರು.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button