Politics

*ಮುಡಾ ಅಧ್ಯಕ್ಷ ಸ್ಥಾನಕ್ಕೆ ಕೆ. ಮರಿಗೌಡ ರಾಜೀನಾಮೆ*

ಪ್ರಗತಿವಾಹಿನಿ ಸುದ್ದಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕರ-ಮುಡಾ ಅಧ್ಯಕ್ಷ ಸ್ಥಾನಕ್ಕೆ ಕೆ.ಮರಿಗೌಡ ರಾಜೀನಾಮೆ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ಸೂಚನೆ ಮೇರೆಗೆ ಮರಿಗೌಡ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದಿಬಂದಿದೆ.

ಮುಡಾ ಹಗರಣದಿಂದ ತೀವ್ರ ಮುಜುಗರಕ್ಕೆ ಸಿಲುಕಿರುವ ರಾಜ್ಯ ಕಾಂಗ್ರೆಸ್ ಸರ್ಕಾರ, ಮುಡಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮರಿಗೌಡಗೆ ಸೂಚಿಸಿತ್ತು. ಮರಿಗೌಡ ವಿರುದ್ಧವೂ ಸಾಕಷ್ಟು ಆರೋಪಗಳು ಕೇಳಿಬಂದಿದ್ದವು. ಈ ಬೆಳವಣಿಗೆ ಬೆನ್ನಲ್ಲೇ ಕೆ.ಮರಿಗೌಡ ರಾಜೀನಾಮೆ ನಿಡಿದ್ದಾರೆ.

ವಿಕಾಸಸೌಧದಲ್ಲಿ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ದೀಪಾ ಚೋಳನ್ ಅವರಿಗೆ ಕೆ.ಮರಿಗೌಡ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.


Home add -Advt

Related Articles

Back to top button