Karnataka News

*ಸಿಎಂ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ ಗೆ ಬಿಗ್ ರಿಲೀಫ್*

ಪ್ರಗತಿವಾಹಿನಿ ಸುದ್ದಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಭೈರತಿ ಸುರೇಶ್ ಅವರಿಗೆ ಹೈಕೋರ್ಟ್ ಏಕಸದಸ್ಯ ಪೀಠ ಬಿಗ್ ರಿಲೀಫ್ ನೀಡಿದೆ.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ ಅವರಿಗೆ ಜಾರಿ ನಿರ್ದೇಶನಾಲಯ-ಇಡಿ ನೀಡಿದ್ದ ಸಮನ್ಸ್ ನ್ನು ಹೈಕೋರ್ಟ್ ರದ್ದುಗೊಳಿಸಿದೆ.

ಇಡಿ ಸಮನ್ಸ್ ರದ್ದು ಮಾಡುವಂತೆ ಕೋರಿ ಸಿಎಂ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್, ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಸುದೀರ್ಘವಾಗಿ ಅರ್ಜಿ ವಿಚಾರಣೆ ನಡೆಸಿದ್ದ ಕೋರ್ಟ್ ಇಂದು ತೀರ್ಪು ಪ್ರಕಟಿಸಿದೆ. ಇಡಿ ಸಮನ್ಸ್ ರದ್ದುಗೊಳಿಸಿ ಆದೇಶ ಹೊರಡಿಸಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button