Karnataka NewsLatestPolitics
*ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ರಾಜ್ಯಪಾಲರು; ಇನ್ನಷ್ಟು ಹೆಚ್ಚಾಯ್ತು ಮುಡಾ ಸಂಕಷ್ಟ*

ಪ್ರಗತಿವಾಹಿನಿ ಸುದ್ದಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ – ಮುಡಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಂಕಷ್ಟ ಇನ್ನಷ್ಟು ಬಿಗಿಯಾಗಿದೆ. ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ.
ಮುಡಾ ಹಗರಣ ಆರೋಪಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ವಿಚಾರಣೆ, ತನಿಖೆ ನಡೆಸಬಹುದು ಎಂದು ರಾಜ್ಯಪಾಲರು ಅನುಮತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆ ಆರಂಭವಾಗಲಿದೆ.
ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಾಹಂ ನೀಡಿದ್ದ ದೂರಿಗೆ ಸಂಬಂಧಿಸಿದಂತೆ ರಾಜ್ಯಪಲರು ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ