Karnataka News

*ಮುಡಾ ಬೆನ್ನಲ್ಲೇ ಬುಡಾ ಹಗರಣ ಬೆಳಕಿಗೆ: ತನಿಖೆಗೆ ಆಗ್ರಹಿಸಿ ಸ್ವಪಕ್ಷದ ಶಾಸಕರಿಂದಲೇ ಸರ್ಕಾರಕ್ಕೆ ಪತ್ರ*

ಪ್ರಗತಿವಾಹಿನಿ ಸುದ್ದಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕರ-ಮುಡಾ ಹಗರಣ ರಾಜ್ಯದಲ್ಲಿ ಭಾರಿ ಸದ್ದು ಮಾಡಿರುವಾಗಲೇ ಬಳ್ಳಾರಿಯಲ್ಲಿ ಬುಡಾ ಹಗರಣ ಕೂಡ ಬೆಳಕಿಗೆ ಬಂದಿದೆ. ಡಿಸಿಎಂ ಡಿ.ಕೆ.ಶಿವಕುಮಾರ್ ಆಪ್ತರಾಗಿರುವ ಬುಡಾ ಅಧ್ಯಕ್ಷ ತನ್ನ ಅಧಿಕಾರ ದುರುಪಯೋಗಪಡಿಸಿಕೊಂಡು ಅಕ್ರಮ ನಡೆಸಿದ್ದಾರೆ ಎಂದು ಕಾಂಗ್ರೆಸ್ ಶಾಸಕರೇ ಆರೋಪಿಸಿದ್ದಾರೆ.

ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರ-ಬುಡಾ ಅಧ್ಯಕ್ಷ ಜೆ.ಎಸ್.ಆಂಜನೇಯಲು ಅಧಿಕಾರ ದುರುಪಯೋಗಪಡಿಸಿಕೊಂಡು ಅಕ್ರಮ ಎಸಗಿದ್ದಾರೆ. ಲೇಔಟ್ ನಿರ್ಮಾಣ, ಅನುಮತಿ ಹಾಗೂ ಹಂಚಿಕೆ ಸಂಬಂಧ ಮಾರ್ಚ್ 7 ಹಾಗೂ ಜುಲೈ 8ರಂದು ನಡೆದ ಸಭೆಯ ನಡಾವಳಿಯಲ್ಲಿ ಅಧಿಕಾರ ದುರುಪಯೋಗ ಪಡಿಸಿಕೊಂಡು ಭ್ರಷ್ಟಾಚಾರ ನಡೆಸಿದ್ದಾರೆ ಎಂದು ಆರೋಪಿ ಆಂಜನೇಯಲು ವಿರುದ್ಧ ಶಾಸಕರು ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ಬುಡಾ ಅಕ್ರಮದ ಬಗ್ಗೆ ತನಿಖೆ ನಡೆಸುವಂತೆ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ, ಕಂಪ್ಲಿ ಶಾ ಜೆ.ಎಸ್.ಗಣೇಶ್ ಪತ್ರ ಬರೆದು ಆಗ್ರಹಿಸಿದ್ದಾರೆ. ಆಂಜನೇಯಲು ಬುಡಾ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿ ಕೇವಲ 7ತಿಂಗಳಾಗಿದ್ದು, ಆಗಲೇ ಅವರ ವಿರುದ್ಧ ಸ್ವಪಕ್ಷದ ಶಾಸಕರೇ ಭ್ರಷ್ಟಾಚಾರ ಆರೋಪ ಮಾಡಿರುವುದು ಅಚ್ಚರಿಗೆ ಕಾರಣವಾಗಿದೆ.

Home add -Advt

Related Articles

Back to top button